ಸಿಂಧನೂರು : ತುಂಗಭದ್ರಾ ಡ್ಯಾಂಗೆ 1550 ಕ್ಯೂಸೆಕ್ ಒಳಹರಿವು

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 6, 2026

ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 06-07-2026ರಂದು 1550 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಕಳೆದ ಮರ‍್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ತುಂಗಾ ಅಣೆಕಟ್ಟೆ ಭರ್ತಿಯಾಗಿದೆ. ಈಗಾಗಿ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಗೆ ಒಳಹರಿವು ಆರಂಭವಾಗಿದೆ.
ಕಳೆದ ವರ್ಷ ಇದೇ ಸಮಯದಲ್ಲಿ ಜಲಾಶಯದಲ್ಲಿ 77.34 ಟಿಎಂಸಿ ನೀರು ಸಂಗ್ರಹವಿದ್ದರೆ, 77,490 ಕ್ಯೂಸೆಕ್ ಒಳಹರಿವು ದಾಖಲಾಗಿತ್ತು, 62,444 ಕ್ಯೂಸೆಕ್ ನೀರನ್ನು ಹರಿಬಿಡಲಾಗಿತ್ತು. ಕಳೆದ ವರ್ಷದ ಪರಿಸ್ಥಿತಿಗೂ ಈ ವರ್ಷದ ಸ್ಥಿತಿಗೂ ಸಂಪೂರ್ಣ ತದ್ವಿರುದ್ಧ ಇದ್ದು, ಮುಂಗಾರು ಮಳೆ ಸುರಿಯದಿರುವುದರಿಂದ ತುಂಗಭದ್ರಾ ಅಣೆಕಟ್ಟಿನಲ್ಲಿ ಪ್ರಸ್ತುತ ದಿನಾಂಕ: 06-07-2026ರಂದು ಕೇವಲ 9.38 ಟಿಎಂಸಿ ಮಾತ್ರ ನೀರಿನ ಸಂಗ್ರಹವಿದೆ. 140 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಹೀಗಾಗಿ ಈ ಬಾರಿ ಸರ್ಕಾರ ಕುಡಿಯುವ ನೀರಿನ ಉದ್ದೇಶಕ್ಕೆ ಹೊರತುಪಡಿಸಿ, ಮುಂಗಾರು ಹಂಗಾಮಿಗೆ ನಾಲೆಗಳಿಗೆ ನೀರು ಹರಿಸುವುದಿಲ್ಲ ಎಂದು ಘೋಷಿಸಿದೆ.


Spread the love

Leave a Reply

Your email address will not be published. Required fields are marked *