ಸಿಂಧನೂರು : ಕಾಂಗ್ರೆಸ್‌ನಿಂದ ಹಿಟ್ನಾಳ್ ಪರ ಭರ್ಜರಿ ಪ್ರಚಾರ

Spread the love

ನಮ್ಮ ಸಿಂಧನೂರು, ಎಪ್ರಿಲ್ 25
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಸೇರಿದಂತೆ ಕಾಂಗ್ರೆಸ್‌ನ ಮುಂಚೂಣಿ ಮುಖಂಡರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಭರ್ಜರ ಪ್ರಚಾರ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ಹಾಗೂ ಸಾರ್ವಜನಿಕರ ಸಭೆಯಲ್ಲಿ ಕೈ ಅಭ್ಯರ್ಥಿ ಹಿಟ್ನಾಳ್ ಅವರಿಗೆ ಮತ ಚಲಾಯಿಸುವ ಮೂಲಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕೈಗೊಳ್ಳಲು ಬಲ ನೀಡುವಂತೆ ಮನವಿ ಮಾಡಿದರು. ನಗರದ ವಾರ್ಡ್ ನಂ.25,,26,27ಮತ್ತು 28 ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳುವ ಮೂಲಕ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರದ ವಿವಿಧ ವಾರ್ಡ್ಗಳ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮತದಾರರು ಇದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *