ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 21
2025-26ನೇ ಶೈಕ್ಷಣಿಕ ಸಾಲಿನಲ್ಲಿ ಸಿಂಧನೂರಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿಗಳ ಪ್ರವೇಶಕ್ಕೆ ಮಹಿಳಾ ಅಭ್ಯರ್ಥಿಗಳಿಂದ ಕರ್ನಾಟಕ ಸರ್ಕಾರದ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸ್ನಾತಕೋತ್ತರ ಕೇಂದ್ರದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, “ಎಂ.ಎ ವಿಭಾಗದಲ್ಲಿ ಕನ್ನಡ, ಇಂಗ್ಲೀಷ್, ಅರ್ಥಶಾಸ್ತ್ರ, ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ಶಿಕ್ಷಣ., ಎಂ.ಕಾಂ ವಾಣಿಜ್ಯ ಶಾಸ್ತ್ರ, ಎಂ.ಎಸ್ಸಿ ಗಣಿತಶಾಸ್ತ್ರ, ಕಂಪ್ಯೂಟರ್ ಸೈನ್ಸ್ (ಗಣಕ ಅಧ್ಯಯನ) ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಆನ್‌ಲೈನ್ ಅರ್ಜಿ ಆರಂಭ 15-07-2025, ಕೊನೆಯ ದಿನಾಂಕ: 15-08-2025, ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಿಂಧನೂರು ಕಚೇರಿಗೆ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ಪ್ರವೇಶ ಪಡೆಯಲು ಕೌನ್ಸೆಲಿಂಗ್‌ಗೆ ಹಾಜರಾಗಿ ಮೆರಿಟ್ ಮತ್ತು ಕೆಟಗರಿ ಆಧಾರದಲ್ಲಿ ಪ್ರವೇಶಾತಿ ಪಡೆದುಕೊಳ್ಳಬಹುದಾಗಿದೆ. ಕೌನ್ಸೆಲಿಂಗ್ ದಿನಾಂಕವನ್ನು ವಿಶ್ವ ವಿದ್ಯಾಲಯದ ವೆಬ್‌ಸೈಟ್‌ನಲ್ಲಿ ನಂತರ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗೆ ನಗರದ ಸ್ನಾತಕೋತ್ತರ ಕೇಂದ್ರಕ್ಕೆ ಭೇಟಿಯಾಗಬಹುದು” ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕ
ಮಾಹಿತಿಗೆ ಸಂಯೋಜಕ ಡಾ.ಕೆ.ಪಿ.ಸುರೇಶ ಮೊ: 9449577652, ಯುಯುಸಿಎಂಎಸ್ ನಿರ್ವಾಹಕ ಶ್ರೀನಿವಾಸ.ಕೆ. 8105489490 ಅವರನ್ನು ಸಂಪರ್ಕಿಸಬಹುದಾಗಿದೆ.