ಸಿಂಧನೂರು: ಬಾಣಂತಿಯರ ಸರಣಿ ಸಾವು, ಮೃತ ಕುಟುಂಬಕ್ಕೆ ಪರಿಹಾರ, ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ಸರ್ಕಾರ, ಪ್ರತಿ ಪಕ್ಷದ ಮುಖಂಡರಿಗೆ ಮನವಿ

Spread the love

ನಮ್ಮ ಸಿಂಧನೂರು, ಡಿಸೆಂಬರ್ 17
ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ ನಾಲ್ವರು ಬಾಣಂತಿಯರ ಸರಣಿ ಸಾವಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಮೃತ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಈ ಬಗ್ಗೆ ನಿರ್ಲಕ್ಷö್ಯವಹಿಸಿದ ಜಿಲ್ಲಾಡಳಿತದ ವಿರುದ್ಧ ಸೂಕ್ತ ಕ್ರಮ ಜರುಗಿಸಿ, ಅವ್ಯವಸ್ಥೆಯ ಆಗರವಾಗಿರುವ ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ಒತ್ತಾಯಿಸಿ, ದಿನಾಂಕ:17-12-2024ರAದು ಬೆಳಗಾವಿಯ ವಿಶೇಷ ಅಧಿವೇಶನದ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸಂಘಟನೆಯ ಮುಖಂಡರು ಸರ್ಕಾರದ ಪ್ರಮುಖ ಸಚಿವರು ಹಾಗೂ ಪ್ರತಿಪಕ್ಷದ ನಾಯಕರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಗಳು, ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಚಲುವಾದಿ ನಾರಾಯಣ ಸ್ವಾಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ನಮ್ಮ ಕರ್ನಾಟಕ ಸೇನೆಯ ಸಿಂಧನೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ, “ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ ಅಸ್ವಸ್ಥಗೊಂಡು ಆರ್.ಎಚ್.ಕ್ಯಾಂಪ್ 3ರ ಮೌಸಂಬಿ ಮಂಡಲ್, ರಾಗಲಪರ್ವಿಯ ಚನ್ನಮ್ಮ, ಉದ್ಬಾಳ.ಜೆ ಗ್ರಾಮದ ಚಂದ್ರಕಲಾ ಹಾಗೂ ಅಂಕುಶದೊಡ್ಡಿಯ ರೇಣುಕಮ್ಮ ನಾಲ್ವರು ಬಾಣಂತಿಯರು ಮೃತಪಟ್ಟಿದ್ದು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು.
ಮೃತ ನಾಲ್ವರು ಬಾಣಂತಿಯರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಅನಾಥವಾಗಿರುವ ಮಕ್ಕಳ ಜಬ್ದಾರಿಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ನವೆಂಬರ್ 11ರಿಂದ ವರದಿಯಾಗಿವೆ. ಆದರೆ ಅಕ್ಟೋಬರ್ 21-10-2024ರಿಂದ 31-10-2024ರ ಅವಧಿಯಲ್ಲಿ ಸಿಂಧನೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂವರು ಬಾಣಂತಿಯರು ಮೃತಪಟ್ಟಿದ್ದಾರೆ. ನವೆಂಬರ್ 2ರಂದು ಮತ್ತೊಬ್ಬ ಬಾಣಂತಿ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯುವಲ್ಲಿ ನಿರ್ಲಕ್ಷö್ಯ ವಹಿಸಿದ ರಾಯಚೂರು ಜಿಲ್ಲಾಡಳಿತ, ಡಿಎಚ್‌ಒ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು, ತಾಯಂದಿರು ಮೃತಪಟ್ಟ ಕಾರಣ ಅನಾಥವಾಗಿರುವ ನಾಲ್ಕು ನವಜಾತ ಶಿಶುಗಳ ಹೊಣೆಯನ್ನು ಸರ್ಕಾರವೇ ಹೊತ್ತಕೊಳ್ಳಬೇಕು, ಮಹಿಳೆಯರ ಸಾವಿನ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು, ನಾಲ್ವರು ಬಾಣಂತಿಯರು ಸರಣಿ ಸಾವಿನ ಕುರಿತು ಸಂಪೂರ್ಣ ನಿರ್ಲಕ್ಷö್ಯ ತಾಳಿದ ರಾಯಚೂರು ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಅವರನ್ನು ಈ ಕೂಡಲೇ ಅಮಾನತುಗೊಳಿಸಬೇಕು, ಸಿಂಧನೂರು ನಗರದ ಪಿಡಬ್ಲುö್ಯಡಿ ಕ್ಯಾಂಪಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಶೀಘ್ರವೇ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿ, ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಿಸಬೇಕು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್‌ಎಂಎಸ್‌ಸಿಎಲ್) ವನ್ನು ತಮಿಳುನಾಡು ಮಾದರಿಯಲ್ಲಿ ಸಶಕ್ತಗೊಳಿಸಿ, ಗುಣಮಟ್ಟದ ಔಷಧವನ್ನು ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ವಿತರಿಸಬೇಕು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್‌ಎಂಎಸ್‌ಸಿಎಲ್)ವನ್ನು ರಾಜಕೀಯ ಹಸ್ತಕ್ಷೇಪ ಇಲ್ಲದಂತೆ, ಅಧಿಕಾರಿಗಳು ತಲೆಹಾಕದಂತೆ ಅದನ್ನು ಸ್ವತಂತ್ರ ಸಂಸ್ಥೆಯನ್ನಾಗಿ ರೂಪಿಸಬೇಕು ಎಂಬ ಬೇಡಿಕೆಯುಳ್ಳ ಮನವಿಪತ್ರವನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಬೂದೇಶ ಮರಾಠ, ಪ್ರಶಾಂತ ಸೇರಿದಂತೆ ಇನ್ನಿತರರು ಇದ್ದರು.


Spread the love

Leave a Reply

Your email address will not be published. Required fields are marked *