ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 14
ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಾಬುಗೌಡ ಬಾದರ್ಲಿ ಅವರನ್ನು ನಗರದ ಎವಿಎಸ್ ಬ್ರಿಲಿಯಂಟ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಕಾಲೇಜಿನ ವತಿಯಿಂದ ಸೋಮವಾರ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಾಬುಗೌಡ ಬಾದರ್ಲಿ, “ವಿದ್ಯಾರ್ಥಿಗಳು ಆಸಕ್ತಿಯಿಂದ ಅಭ್ಯಾಸ ಮಾಡಬೇಕು. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿ, ಕಲಿಸಿದ ಗುರುಗಳಿಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು. ವಿದ್ಯಾರ್ಥಿಗಳು ಉನ್ನತ ಗುರಿಯನ್ನಿಟ್ಟುಕೊಂಡು ಮುಂದೆ ಸಾಗಬೇಕು. ಗುರಿಯೆಡೆಗೆ ಹೋಗುವಾಗ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದರೆ ಯಶಸ್ಸು ಸಾಧ್ಯವಾಗುತ್ತದೆ. ಹೊಸದಾಗಿ ಪ್ರಾಧಿಕಾರದ ಅಧ್ಯಕ್ಷನಾಗಿ ನಾನು ನೇಮಕಗೊಂಡಿದ್ದು, ಸಿಂಧನೂರಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಾದ ವೈ.ನರೇಂದ್ರನಾಥ, ಖಾಜಿಮಲಿಕ್, ಮಮತಾ ಮೌಲಪ್ಪ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಅಧ್ಯಕ್ಷ ಎಂ.ಸಿ.ಅAಕಯ್ಯ, ಕಾರ್ಯದರ್ಶಿ ಆರ್.ವೆಂಕಟೇಶ್‌ರವಲು, ಖಜಾಂಚಿ ತ್ರಿವಿಕ್ರಮಬಾಬು, ಆಡಳಿತಾಧಿಕಾರಿ ಬಸವರಾಜ ಕೋಳಬಾಳ, ಪ್ರಾಚಾರ್ಯ ಹೇಮಂತಕುಮಾರ್ ಆರ್.ವಿ. ಇದ್ದರು.