ನಮ್ಮ ಸಿಂಧನೂರು, ಜುಲೈ 12
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಯುವ ಘಟಕದ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಅವರು, ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಕೆ.ಎಚ್.ಮುನಿಯಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಎಮ್ಮೆಲ್ಸಿ ಸಲೀಮ್ ಅಹ್ಮದ್ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು, ಸದಸ್ಯರು ಹಾಗೂ ರಾಯಚೂರು ಜಿಲ್ಲೆಯ ಜನ ಪ್ರತಿನಿಧಿಗಳು, ಕುಟುಂಬಸ್ಥರು ಉಪಸ್ಥಿತರಿದ್ದರು.