ನಮ್ಮ ಸಿಂಧನೂರು, ಜೂನ್ 26
ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಸವನಗೌಡ ಬಾದರ್ಲಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಜ್ಞಾನ ಮತ್ತು ತಂತ್ರಜ್ಞಾನ, ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್.ಭೋಸರಾಜು ಸೇರಿದಂತೆ ಇನ್ನಿತರರು ಇದ್ದರು.