ನಮ್ಮ ಸಿಂಧನೂರು, ಮಾರ್ಚ್ 24
ನಗರದಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು. ಜಯಂತಿ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಕುಂಭ, ಕಳಸ ಹೊತ್ತ ಮಹಿಳೆಯರು ಮೆರವಣಿಗೆಗೆ ಕಳೆ ತಂದರು. ನಂತರ ನಗರದ ಕೋಟೆ ಈರಣ್ಣ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ, ಎಮ್ಮೆಲ್ಸಿ ಬಸನಗೌಡ ಬಾದರ್ಲಿ, ಮೂರುಮೈಲ್‌ಕ್ಯಾಂಪ್ ಕರಿಬಸವನಗರದ ಸೋಮನಾಥ ಶಿವಾಚಾರ್ಯರು, ಮಸ್ಕಿಯ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಬಂಗಾರಿಕ್ಯಾಂಪ್‌ನ ಸ್ವಾಮೀಜಿಯವರು, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪಂಪನಗೌಡ ತಾವರಗೆರೆ, ಮಾಜಿ ಅಧ್ಯಕ್ಷ ಅಶೋಕಗೌಡ ಗದ್ರಟಗಿ ಸೇರಿದಂತೆ ಸಮಾಜದ ಗಣ್ಯರು, ಹಿರಿಯರು, ಮುಖಂಡರು, ಮಹಿಳೆಯರು ಪಾಲ್ಗೊಂಡಿದ್ದರು.
