ಕೊಪ್ಪಳ ಎಂಪಿ ಕ್ಷೇತ್ರ: ಸಿಂಧನೂರಿನಲ್ಲಿ ಬಿಜೆಪಿಯಿಂದ ಚುರುಕಿನ ಪ್ರಚಾರ, ಮಾರ್ಚ್ 28 ರಂದು ಪ್ರತಿನಿಧಿಗಳ ಸಭೆ

Spread the love

ನಮ್ಮ ಸಿಂಧನೂರು, ಮಾರ್ಚ್ 28
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಖಂಡರು ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಂಟಿ ಪ್ರಚಾರಕ್ಕೆ ಮುಂದಾಗಿದ್ದು, ಬುಧವಾರ ಕೊಪ್ಪಳದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಂಡು ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಸಭೆಗಳನ್ನು ನಡೆಸಲು ಮುಂದಾಗಿದೆ.
ಪಕ್ಷದ ಅಭ್ಯರ್ಥಿ ಡಾ.ಬಸವರಾಜ ಎಸ್ ಕ್ಯಾವಟರ್ ಅವರು ಪಕ್ಷದ ಕಾರ್ಯಕರ್ತರ ಹಾಗೂ ಬೆಂಬಲಿಗರ ಮನಗೆಲ್ಲಲು ಮಾರ್ಚ್ 28ರಂದು ಬೆಳಿಗ್ಗೆ 8 ಗಂಟೆಯಿಂದ 10.30ರವರೆಗೆ ಉಪಾಹಾರ ಹಾಗೂ ಪ್ರಮುಖರ ಮನೆಯ ಭೇಟಿ ಕಾರ್ಯಕ್ರಮ ಹಾಕಿಕೊಂಡಿದ್ದು, ಅಂದು ಸಂಜೆ 5 ಗಂಟೆಯಿಂದ ರಾತ್ರಿ 8ಗಂಟೆಯವರೆಗೆ ಸತ್ಯಾಗಾರ್ಡನ್‌ನಲ್ಲಿ ಬೂತ್ ಅಧ್ಯಕ್ಷರ ಮೇಲ್ಪಟ್ಟ ಪ್ರತಿನಿಧಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಿಂಧನೂರು ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳು ಬಿಜೆಪಿಗೆ ನಿರ್ಣಾಯಕ ಎಂದು ಹೇಳಲಾಗುತ್ತಿದ್ದು, ಹಾಗಾಗಿ ಬಿಜೆಪಿ ಅಭ್ಯರ್ಥಿ ಈ ಎರಡು ಕ್ಷೇತ್ರದ ಪ್ರಮುಖರು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವರನ್ನು ಮೇಲಿಂದ ಮೇಲಿ ಭೇಟಿಯಾಗುತ್ತಿದ್ದಾರೆಂದು ಹೇಳಲಾಗುತ್ತಿದೆ.


Spread the love

Leave a Reply

Your email address will not be published. Required fields are marked *