ಸಿಂಧನೂರು: ಸಿಎಂ ಬಹಿರಂಗ ಪ್ರಚಾರಕ್ಕೆ ಭರದ ಸಿದ್ಧತೆ

Spread the love

ನಮ್ಮ ಸಿಂಧನೂರು, ಎಪ್ರಿಲ್ 27
ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಸಿಂಧನೂರಿಗೆ ಸಿಎಂ ಸಿದ್ದರಾಮಯ್ಯ ಅವರು ಎಪ್ರಿಲ್ 28ರಂದು ಆಗಮಿಸಲಿದ್ದು, ಪಿಡಬ್ಲುö್ಯಡಿ ಕ್ಯಾಂಪ್‌ನ ಜೂನಿಯರ್ ಕಾಲೇಜು ಮೈದಾನದಲ್ಲಿ ಭರದ ಸಿದ್ಧತೆ ನಡೆಸಲಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದಲೇ ವೇದಿಕೆ ಸಿದ್ಧಪಡಿಸುತ್ತಿರುವುದು ಕಂಡುಬತು. ಸಿಂಧನೂರು, ಮಸ್ಕಿ ಹಾಗೂ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಬಹಿರಂಗ ಸಭೆಯನ್ನು ಸಿಂಧನೂರಿನಲ್ಲಿ ನಡೆಸಲಾಗುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ. ಸಿರುಗುಪ್ಪ, ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಸಿಂಧನೂರು ಕೇಂದ್ರ ಸ್ಥಾನವಾಗಿರುವುದರಿಂದ ಇಲ್ಲಿಯೇ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *