ನಮ್ಮ ಸಿಂಧನೂರು, ಎಪ್ರಿಲ್ 27
ಕೊಪ್ಪಳ ಲೋಕಸಭೆ ಕ್ಷೇತ್ರದ ಬಹಿರಂಗ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲು ಎಪ್ರಿಲ್ ೨೮ರಂದು ಸಿಂಧನೂರಿಗೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರು ಹೆಲಿಪ್ಯಾಡ್ ಹಾಗೂ ಪ್ರಚಾರ ಸಮಾವೇಶ ಆಯೋಜಿಸಿರುವ ಜೂನಿಯರ್ ಕಾಲೇಜು ಆವರಣ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸೂಕ್ತ ಬಂದೋಬಸ್ತ್ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಸಲಹೆ, ನಿರ್ದೇಶನ ನೀಡಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯವರು ಇದ್ದರು.


