ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 8
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಂಗಾಯಣ ಕಲಬುರಗಿ ಹಾಗೂ ಆಕ್ಸ್ಫರ್ಡ್ ಸಮೂಹ ಸಂಸ್ಥೆಗಳ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಜ.10ರಿಂದ 12ರವರೆಗೆ 3 ದಿನಗಳ ಕಾಲ ಕಾಲೇಜು ರಂಗೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜು ರಂಗೋತ್ಸವ ಸಮಿತಿ ಸಂಚಾಲಕ ಎಸ್.ಬಿ.ಹರಿಕೃಷ್ಣ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.10ರಂದು 2 ನಾಟಕ, ಜ.11ರಂದು 3 ನಾಟಕ ಹಾಗೂ ಜ.12ರಂದು ಎರಡು ನಾಟಕಗಳನ್ನು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಅಭಿನಯಿಸಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಕಲಾಸಕ್ತಿ ಹಾಗೂ ಸೃಜನಶೀಲತೆ ಮೂಡಿಸುವ ಸದುದ್ದೇಶದಿಂದ ಕಾಲೇಜು ರಂಗೋತ್ಸವ ಹಮ್ಮಿಕೊಳ್ಳಲಾಗಿದೆ. ಜ.12ರಂದು ಮಧ್ಯಾಹ್ನ 3 ಗಂಟೆಗೆ ರಂಗೋತ್ಸವ ಸಮಾರೋಪ ಜರುಗಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶಿವನಗೌಡ ಗೊರೇಬಾಳ, ಬಸವರಾಜ ಹಿರೇಗೌಡ್ರು, ಆಕ್ಸ್ಫರ್ಡ್ ಕಾಲೇಜಿನ ಆಡಳಿತಾಧಿಕಾರಿ ಸಂಜೀವಕುಮಾರ, ಸರದಾರ ಬಿ ಇನ್ನಿತರರು ಇದ್ದರು.