ಸಿಂಧನೂರು: ಸೆ.21ರಂದು ಜಮಾಅತೆ ಇಸ್ಲಾಮೀ ಹಿಂದ್‌ ವತಿಯಿಂದ ವಿಚಾರಗೋಷ್ಠಿ

Spread the love

ನಮ್ಮ ಸಿಂಧನೂರು, ಸೆಪ್ಟೆಂಬರ್ 20
“ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ ” ರಾಜ್ಯವ್ಯಾಪಿ ಅಭಿಯಾನದ ಅಂಗವಾಗಿ ನಗರದ ಟೌನ್‌ಹಾಲ್‌ನಲ್ಲಿ
ದಿನಾಂಕ: 21-09-2024 ಶನಿವಾರದಂದು ಸಾಯಂಕಾಲ 7.15 ಗಂಟೆಗೆ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ತಾಲೂಕು ಅಧ್ಯಕ್ಷ ಮುಹಮ್ಮದ್ ಹುಸೇನ್ ಹಾಗೂ ಅಭಿಯಾನದ ಸಂಚಾಲಕ ಡಾ.ವಸೀಂ ಅಹ್ಮದ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾರ್ಯಕ್ರಮದ ಸಾನಿಧ್ಯವನ್ನು ತಿಮ್ಮಾಪುರ ಕಲ್ಯಾಣ ಆಶ್ರಮದ ಮಹಾಂತ ಸ್ವಾಮೀಜಿ ಸಾಲಿಮಠ ಮುದಗಲ್ ವಹಿಸುವರು. ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಇ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಸದಸ್ಯ ರಾಜಶೇಖರ ಹಿಟ್ನಾಳ್, ಶಾಸಕರಾದ ಹಂಪನಗೌಡ ಬಾದರ್ಲಿ,ಆರ್.ಬಸನಗೌಡ ತುರ್ವಿಹಾಳ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ “ಪ್ರವಾದಿ ಮುಹಮ್ಮದ್ (ಸ) ಲೇಖನ ಸಂಕಲನ” ಪುಸ್ತಕ ಬಿಡುಗಡೆಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.


Spread the love

Leave a Reply

Your email address will not be published. Required fields are marked *