ನಮ್ಮ ಸಿಂಧನೂರು, ಜುಲೈ 22
ಧರ್ಮಸ್ಥಳದಲ್ಲಿ 400ಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದು, ಅವರ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದು ಹೂತುಹಾಕಲಾಗಿದೆ ಎಂದು ಆರೋಪಿಸಿರುವ ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಕ್ಷ, ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ: 23-07-2025ರಂದು ಪ್ರತಿಭಟನೆಗೆೆ ಕರೆ ನೀಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪಕ್ಷದ ಮುಖಂಡರಾದ ಎಂ.ಗಂಗಾಧರ ಅವರು, “ದೇಶದಲ್ಲೇ ಅತಿದೊಡ್ಡ ಘನಘೋರ ಕೊಲೆ ಪ್ರಕರಣ ಇದಾಗಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರನ್ನು ತನಿಖೆಯ ಮೂಲಕ ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಲು ಉನ್ನತಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.