ನಮ್ಮ ಸಿಂಧನೂರು, ಜೂನ್ 30
ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿ ದನದ ಸಂತೆ ನಡೆಯುವ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಎರಡು ಗುಂಪುಗಳ ನಡುವೆ ಯಾವುದೋ ಕಾರಣಕ್ಕೆ ಪರಸ್ಪರ ಮಾತಿನ ಚಕಮಕಿ ನಡೆದು ಗಲಾಟೆಯಾದ ಕುರಿತು ವರದಿಯಾಗಿದೆ. ಈ ಗಲಾಟೆಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಗಲಾಟೆಯಾಗಿದೆ ಎಂಬ ಕುರಿತು ಮಾಹಿತಿ ಇಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾದ ಕೆಲವರಿಗೆ ಚಿಕಿತ್ಸೆ ನೀಡಲಾಯಿತು. ಡಿವೈಎಸ್ಪಿ ಬಿ.ಎಸ್.ತಳವಾರ, ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿದರು. ಜೆಡಿಎಸ್ನ ಅಭಿಷೇಕ ನಾಡಗೌಡ, ಬಿಜೆಪಿಯ ಕೆ.ರಾಜಶೇಖರ್ ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿದರು.
