ಸಿಂಧನೂರು: ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ನಾಲ್ಕನೇ ದಿನಕ್ಕೆ ಕಾಲಿಟ್ಟ ನಮ್ಮ ಕರ್ನಾಟಕ ಸೇನೆ ಹೋರಾಟ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ನವೆಂಬರ್ 11

ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರ್.ಎಚ್.ಕ್ಯಾಂಪ್ 3ರ ಮಹಿಳೆ ಮೌಸಂಬಿ ಮಂಡಲ್, ಉದ್ಬಾಳ.ಜೆ ಗ್ರಾಮದ ಚಂದ್ರಕಲಾ ಹಾಗೂ ಅಂಕುಶದೊಡ್ಡಿಯ ರೇಣುಕಮ್ಮ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಿ ಕಾನೂನು ರೀತ್ಯ ಕ್ರಮ ಜರುಗಿಸಬೇಕು ಹಾಗೂ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ಒತ್ತಾಯಿಸಿ, ನಮ್ಮ ಕರ್ನಾಟಕ ಸೇನೆ ವತಿಯಿಂದ ನಗರದ ತಹಸಿಲ್ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಸೋಮವಾರ ನಾಲ್ಕನೇ ದಿನವೂ ಮುಂದುವರಿಯಿತು.
ಸಂತ್ರಸ್ತ ಕುಟುಂಬದವರ ಆಕ್ರಂದನ
ಅಂಕುಶದೊಡ್ಡಿಯ ಮೃತ ರೇಣುಕಮ್ಮ ಅವರ ಸಂಬAಧಿಗಳು ಹೋರಾಟಕ್ಕೆ ಬೆಂಬಲಿಸಿ ಧರಣಿಯಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿದ, ಮೃತ ರೇಣುಕಮ್ಮಳ ಮಾವ ಪರಶುರಾಮ ಅಂಕುಶದೊಡ್ಡಿ, ಆಸ್ಪತ್ರೆಯಲ್ಲಿ ತಮಗಾದ ಅನುಭವವನ್ನು ಸಾರ್ವಜನಿಕರ ಮುಂದೆ ತೋಡಿಕೊಂಡು ಕಣ್ಣೀರು ಹಾಕಿದರು. ಅಲ್ಲದೇ ಉದ್ಬಾಳ.ಜೆ ಗ್ರಾಮದ ಮಹಿಳೆ ಚಂದ್ರಕಲಾ ಅವರ ಸಂಬಂಧಿಕರು ಸಹ ಸರ್ಕಾರಿ ಆಸ್ಪತ್ರೆಗೆ ಹೆರಿಗೆ ದಾಖಲಿಸಿ, ನಂತರ ಅನುಭವಿಸಿದ ಯಾತನೆಯನ್ನು ಹಾಗೂ ವೈದ್ಯರ ನಿರ್ಲಕ್ಷ್ಯದಿಂದ ಚಂದ್ರಕಲಾ ಮೃತಪಟ್ಟಿದ್ದಾರೆಂದು ಆರೋಪಿಸಿದರು. ಅಲ್ಲದೇ ಆರ್.ಎಚ್.ಕ್ಯಾಂಪ್‌ನ 3ರ ಮೃತ ಮಹಿಳೆ ಮೌಸಂಬಿ ಮಂಡಲ್ ಸಂಬಂಧಿಕರು ಅನಿರ್ದಿಷ್ಟ ಧರಣಿ ಹೋರಾಟದಲ್ಲಿ ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.

Namma Sindhanuru Click For Breaking & Local News

ತಹಸೀಲ್ದಾರ್ ಭೇಟಿ
ತಹಸೀಲ್ದಾರ್ ಅರುಣಕುಮಾರ ದೇಸಾಯಿ ಧರಣಿ ನಿರತ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ, ಧರಣಿ ನಿರತರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಮೃತ ಮಹಿಳೆಯರ ಸಂಬAಧಿಕರು, ತಹಸಿಲ್ದಾರ್ ಮುಂದೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡವನ್ನು ಬಿಚ್ಚಿಟ್ಟರು. ಘಟನೆ ಕಾರಣರಾದವರ ಮೇಲೆ ಕ್ರಮ ಜರುಗಿಸಬೇಕು, ಅಲ್ಲದೇ ಮೃತ ಮಹಿಳೆಯರಿಗೆ ನ್ಯಾಯ ಕೊಡಿಸಬೇಕು, ಸರ್ಕಾರದಿಂದ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ದೇಸಾಯಿ ಅವರು, “ಸರ್ಕಾರಿ ಆಸ್ಪತ್ರೆಯಲ್ಲಿ ಆದ ಲೋಪದೋಷಗಳ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಮಧ್ಯಾಹ್ನ ಸಹಾಯಕ ಆಯುಕ್ತರು ಹಾಗೂ ಡಿಎಚ್‌ಒ ಬರಲಿದ್ದಾರೆ. ಮುಂದೆ ಈ ತರಹದ ಅವಘಡಗಳು ಆಗದಂತೆ ಅಗತ್ಯಕ್ರಮ ಕೈಗೊಳ್ಳಲಾಗುವುದು” ಎಂದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಬಿ.ಎಸ್.ತಳವಾರ ಇದ್ದರು.
“ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಮೃತ ಕುಟುಂಬಗಳಿಗೆ ಪರಿಹಾರ ಕೊಡಿ”
ನಮ್ಮ ಕರ್ನಾಟಕ ಸೇನೆ ಹೋರಾಟ ಬೆಂಬಲಿಸಿ ಮಾತನಾಡಿದ ರೌಡಕುಂದಿಯ ಸದಾನಂದ ಶರಣರು, “ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಯಿAದ ಮಹಿಳೆಯರ ಸಾವುಗಳು ನಡೆದಿರುವುದು ದುರದೃಷ್ಟಕರ. ಈ ರೀತಿಯ ಘಟನೆಗಳು ನಡೆಯಬಾರದು. ಕೂಡಲೇ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು. ಕೂಡಲೇ ಸರ್ಕಾರದಿಂದ ಮೃತ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು” ಎಂದು ಸರ್ಕಾರವನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಉಮೇಶಗೌಡ ಅರಳಹಳ್ಳಿ, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ, ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ, ಜಿಲ್ಲಾ ಸಂಚಾಲಕ ಹುಸೇನ್ ಭಾಷಾ ಇಂದಿರಾನಗರ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬೂದೇಶ ಮರಾಠ, ತಾಲೂಕು ಉಪಾಧ್ಯಕ್ಷ ಗದ್ದೆಪ್ಪ, ಸದ್ದಾಂ, ಎಂ.ಡಿ.ನಬಿ, ಮಲ್ಲಿಕಾರ್ಜುನ, ಅಬ್ದುಲ್ ನಬಿ, ಮಹ್ಮದ್ ಸಾಬ್ ಚಿಟಗಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಹನುಮಂತ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪಾವನಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.


Spread the love

Leave a Reply

Your email address will not be published. Required fields are marked *