ನಮ್ಮ ಸಿಂಧನೂರು, ಜುಲೈ 13
ನಗರದಲ್ಲಿ ಜುಲೈ 14ರಿಂದ 17ರವರೆಗೆ ಗವಿಸಿದ್ಧೇಶ್ವರ ಜಾನಪದ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಐದು ದಿನಗಳ ಕಾಲ ಕುಷ್ಟಗಿ ರಸ್ತೆಯ ಎಪಿಎಂಸಿಯಲ್ಲಿರುವ ರೈತ ಭವನದಲ್ಲಿ ವಿದ್ಯಾರ್ಥಿಗಳಿಗೆ ಡೊಳ್ಳು ಕುಣಿತ ಹಾಗೂ ವೀಗಾಸೆ ನೃತ್ಯದ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸಂಚಾಲಕ ಬೀರಪ್ಪ ಶಂಭೋಜಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರದಲ್ಲಿ 100ರಿಂದ 150 ಆಸಕ್ತ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30ರಿಂದ 4.30ರವರೆಗೆ ಎರಡು ಹಂತದಲ್ಲಿ ಶಿಬಿರದ ನಡೆಸಲಾಗುತ್ತದೆ. ನೋಂದಣಿ ಶುಲ್ಕ ಇರುವುದಿಲ್ಲ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಸಂಘದ ಅಧ್ಯಕ್ಷ ಹನುಮೇಶ ಬಾಗೋಡಿ, ಪ್ರಧಾನ ಕಾರ್ಯದರ್ಶಿ ಬಸವರಾಜ, ಸದಸ್ಯ ಬಸವರಾಜ ಗಸ್ತಿ, ಕಲಾವಿದರಾದ ನಾರಾಯಣ ಮಾಡಸಿರವಾರ, ವೀರೇಶ ಯರದಿಹಾಳ ಮತ್ತಿತರರಿದ್ದರು.