ಸಿಂಧನೂರು: ಅಧಿಕಾರಿಗಳಿಗೆ ಗುಲಾಬಿ ಹೂ ನೀಡಿ, ಸರ್ಕಾರಿ ಸುತ್ತೋಲೆ ಪಾಲನೆಗೆ ಮನವಿ ಮಾಡಿದ ನಮ್ಮ ಕರ್ನಾಟಕ ಸೇನೆ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಅಕ್ಟೋಬರ್ 30

ನಮ್ಮ ಕರ್ನಾಟಕ ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ನಗರದ ವಿವಿಧ ಇಲಾಖೆಗಳಿಗೆ ಬುಧವಾರ ಬೆಳಿಗ್ಗೆ ಭೇಟಿನೀಡಿ, ಅಲ್ಲಿನ ಅಧಿಕಾರಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಸರ್ಕಾರದ ಸುತ್ತೋಲೆಯ ಆದೇಶದಂತೆ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ ಪ್ರತಿಯೊಬ್ಬ ಅಧಿಕಾರಿಯೂ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳ ದಾರವನ್ನು (ಟ್ಯಾಗ್) ಹಾಕಿಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ, “ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಅದರ ಸ್ಮರಣಾರ್ಥ ಸರ್ಕಾರ 16-08-2024ರಂದು ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳು ದಾರವನ್ನು (ಟ್ಯಾಗ್) ಹಾಕಿಕೊಳ್ಳಬೇಕೆಂದು ನಿರ್ಣಯಿಸಿ ಆದೇಶ ಹೊರಡಿಸಿದೆ. ಈ ಕುರಿತು ನಮ್ಮ ಸಂಘಟನೆಯಿಂದ ವಿವಿಧ ಇಲಾಖೆಗಳಿಗೆ ತೆರಳಿ ಅಲ್ಲಿನ ಅಧಿಕಾರಿಗಳಿಗೆ ಮನವಿ ಮಾಡಲಾಗುತ್ತಿದೆ” ಎಂದು ಹೇಳಿದರು.

Namma Sindhanuru Click For Breaking & Local News
Namma Sindhanuru Click For Breaking & Local News

ರಾಜ್ಯ ಘಟಕದ ಕಾಯಾಧ್ಯಕ್ಷ ಉಮೇಶಗೌಡ ಗುಂಜಳ್ಳಿ ಮಾತನಾಡಿ, “ಸರ್ಕಾರಿ ಇಲಾಖೆಗಳಲ್ಲಿ ಒಮ್ಮೊಮ್ಮೆ ಅಧಿಕಾರಿಗಳು ಯಾರು, ಸಾರ್ವಜನಿಕರು ಯಾರು ಎಂಬುವುದೇ ತಿಳಿಯುವುದಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸರ್ಕಾರದ ಆದೇಶವನ್ನು ಪಾಲಿಸುವ ಮೂಲಕ ಜನರು ಗೊಂದಲಕ್ಕೀಡಾಗುವುದನ್ನು ತಪ್ಪಿಸಬೇಕು. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಯ ಕಚೇರಿಗಳಿಗೆ ಅಧಿಕಾರಿಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಸಂಘಟನೆಯಿಂದ ಮನವರಿಕೆ ಮಾಡಲಾಗುತ್ತಿದೆ” ಎಂದು ವಿವರಿಸಿದರು.

Namma Sindhanuru Click For Breaking & Local News
Namma Sindhanuru Click For Breaking & Local News

ಸಂಘಟನೆಯ ಕಾರ್ಯಕರ್ತರು ನಗರಸಭೆ, ತಹಸಿಲ್ ಕಾರ್ಯಾಲಯ, ತಾಲೂಕು ಪಂಚಾಯಿತಿ, ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯ, ಉಪನೋಂದಣಿ ಇಲಾಖೆಯ ಕಚೇರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಭೂಸ್ವಾಧೀನಾಧಿಕಾರಿಗಳ ಕಾರ್ಯಾಲಯ, ಕೆಪಿಟಿಸಿಎಲ್ ಪಿಡಬ್ಲ್ಯುಡಿ, ನೀರಾವರಿ ಇಲಾಖೆ, ಕಾರ್ಯಪಾಲಕ ಎಂಜಿನಿಯರರವರ ಕಚೇರಿ, ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳ ಕಾರ್ಯಾಲಯ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಾಯಾಲಯ ಸೇರಿದಂತೆ ಇನ್ನಿತರೆ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಸರ್ಕಾರದ ಸುತ್ತೋಲೆಯ ಬಗ್ಗೆ ಗಮನ ಸೆಳೆಯಲಾಯಿತು.

Namma Sindhanuru Click For Breaking & Local News
Namma Sindhanuru Click For Breaking & Local News

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬೂದೇಶ ಮರಾಠ, ಜಿಲ್ಲಾ ಸಂಚಾಲಕ ಹುಸೇನ್‌ಬಾಷಾ ಇಂದಿರಾನಗರ, ತಾಲೂಕು ಉಪಾಧ್ಯಕ್ಷ ಗದ್ದೆಪ್ಪ, ನಗರ ಘಟಕ ಕಾರ್ಯದರ್ಶಿಗಳಾದ ಮಂಜು ಪಾಟೀಲ್, ಪ್ರಶಾಂತಕುಮಾರ್, ತಾಲೂಕು ಮುಖಂಡರಾದ ಮಂಜುನಾಥ ಡಿ.ಕೆ, ಸಂತೋಷ ಹಿರೇಮಠ ಇನ್ನಿತರರಿದ್ದರು.

Namma Sindhanuru Click For Breaking & Local News


Spread the love

Leave a Reply

Your email address will not be published. Required fields are marked *