ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ, ಹಸಮಕಲ್
ನಮ್ಮ ಸಿಂಧನೂರು, ಮೇ 24, 2026
ನಗರದ ಪಿಡಬ್ಲ್ಯೂಡಿ ಕ್ಯಾಂಪ್ ನ ಬಾಲಕರ ಸರ್ಕಾರಿ ಪದವಿಪೂರ್ವ (ಜೂನಿಯರ್) ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ಇನ್ನೂ ಬಹಳಷ್ಟು ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಆಗಮಿಸುತ್ತಿದ್ದಾರೆ. ಕಲಾ ವಿಭಾಗ 29, ವಾಣಿಜ್ಯ ವಿಭಾಗ 28 ಹಾಗೂ ವಿಜ್ಞಾನ ವಿಭಾಗದಲ್ಲಿ 159, ಒಟ್ಟು 216 ವಿದ್ಯಾರ್ಥಿಗಳು ಈಗಾಗಲೇ ಪ್ರವೇಶ ಪಡೆದಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ. ಕಾಲೇಜಿನಲ್ಲಿ ಅತ್ಯಂತ ಕಡಿಮೆ ಶುಲ್ಕದೊಂದಿಗೆ ಗರಿಷ್ಠ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ, ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
