ಸಿಂಧನೂರು: ಇನಾಂ ವೀರಾಪುರ ಮರ್ಯಾದೆ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 23

ಧಾರವಾಡ ಜಿಲ್ಲೆಯ ಇನಾಂ ವೀರಾಪುರ ಗ್ರಾಮದಲ್ಲಿ ಪ್ರೇಮಿಸಿ ವಿವಾಹವಾಗಿ ದಾಂಪತ್ಯ ಜೀವನ ನಡೆಸುತ್ತಿದ್ದ ದಂಪತಿಗಳ ಮೇಲಿನ ಪೈಶಾಚಿಕ ದಾಳಿ ಹಾಗೂ ಕೊಲೆ ಘಟನೆಗೆ ಕಾರಣರಾದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸಿಪಿಐ(ಎಂಎಲ್) ಲಿಬರೇಶನ್ ಸರ್ಕಾರವನ್ನು ಆಗ್ರಹಿಸಿದೆ.
ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್ “ಈ ದುಷ್ಕೃತ್ಯವು ಪೈಶಾಚಿಕ ಘಟನೆಯಾಗಿದ್ದು, ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಾಳೆಂಬ ಕಾರಣಕ್ಕೆ ಗರ್ಭಿಣಿ ಮಗಳನ್ನು ಕೊಲೆಗೈದು, ಯುವಕನ ಮನೆಯವರ ಮೇಲೆ ದಾಳಿ ನಡೆಸಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.
“ಸಂವಿಧಾನ ದೇಶವನ್ನು ಜಾತ್ಯತೀತ ರಾಷ್ಟ್ರವೆಂದು ಘೋಷಿಸಿದೆ. ದೇಶ ಸ್ವಾತಂತ್ರ‍್ಯ ಗಳಿಸಿ 78 ವರ್ಷಗಳ ನಂತರವೂ ಹಲವರು ಜಾತಿ ಸಂಕುಚಿತತೆಯಿAದ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಪರಸ್ಪರ ಪ್ರೀತಿಸಿ, ವಿವಾಹವಾಗಿ ತಮ್ಮ ಪಾಡಿಗೆ ತಾವು ಜೀವನ ನಡೆಸುತ್ತಿದ್ದ ಮುಗ್ಧ ದಂಪತಿಯ ಮೇಲೆ, ಕುಟುಂಬದವರ ಈ ವರ್ತನೆ ಪ್ರಾಣಿಗಳಿಗಿಂತಲೂ ಕ್ರೂರವಾಗಿದೆ. ಈ ಘಟನೆಯನ್ನು ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ, ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು” ಅವರು ಆಗ್ರಹಿಸಿದ್ದಾರೆ.


Spread the love

Leave a Reply

Your email address will not be published. Required fields are marked *