ಸಿಂಧನೂರು: ಸರ್ಕಾರಿ ಪಿಯು ಸೈನ್ಸ್ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಹೆಚ್ಚಿದ ಬೇಡಿಕೆ, 150 ವಿದ್ಯಾರ್ಥಿಗಳ ಅಡ್ಮಿಷನ್

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್
ನಮ್ಮ ಸಿಂಧನೂರು, ಮೇ 23, 2026

2026-27ನೇ ಸಾಲಿಗೆ ನಗರದ ಪಿಡಬ್ಲ್ಯುಡಿ ಕ್ಯಾಂಪಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸೈನ್ಸ್ ವಿಭಾಗಕ್ಕೆ ಈಗಾಗಲೇ 150 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಇನ್ನೂ ಬಹಳಷ್ಟು ವಿದ್ಯಾರ್ಥಿಗಳು ಪ್ರವೇಶ ಅರಸಿ ಬರುತ್ತಿದ್ದಾರೆ. 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದು ಗಮನಾರ್ಹ ಸಾಧನೆ ತೋರಿದ್ದು, ಇದು ಪ್ರವೇಶಾತಿ ಹೆಚ್ಚಳಕ್ಕೆ ಕಾರಣವಾಗಿದೆ.
ಪಿಯು ಸೈನ್ಸ್ ಕಾಂಬಿನೇಶನ್
ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ (ಪಿಸಿಎಂಬಿ), ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್ ವಿಜ್ಞಾನ (ಪಿಸಿಎಂಸಿಎಸ್) ಈ ಎರಡು ಸಂಯೋಜನೆಗಳನ್ನು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳು ಅಭ್ಯಾಸ ಮಾಡಬಹುದಾಗಿದ್ದು, ವಿಜ್ಞಾನ ವಿಭಾಗದಲ್ಲಿ ಪ್ರವೇಶ ಪಡೆಯಲು ಅತ್ಯಂತ ಕಡಿಮೆ ಶುಲ್ಕ ಇದ್ದು, ಇದು ಬಡ ಮತ್ತು ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆಯಿರುವ ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಿದೆ.
ಬಡ ವಿದ್ಯಾರ್ಥಿಗಳಿಗೆ ಹೊರೆಯಾಗದ ಪ್ರವೇಶಾತಿ ಶುಲ್ಕ
ಪ್ರಥಮ ವರ್ಷದ ಪಿಯುಸಿಗೆ ದಾಖಲಾತಿ ಪಡೆಯಲು ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.2700, ವಿದ್ಯಾರ್ಥಿನಿಯರಿಗೆ ರೂ.1000, ಪ.ಜಾ & ಪ.ಪಂ. ವಿದ್ಯಾರ್ಥಿಗಳಿಗೆ ರೂ.1000 ಹಾಗೂ ಸಿ1, 2ಎ, 2ಬಿ, 3ಎ, 3ಬಿ ಮತ್ತು ಐ.ಸಿ. ವಿದ್ಯಾರ್ಥಿಗಳಿಗೆ ರೂ.1770 ಶುಲ್ಕ ನಿಗದಿಪಡಿಸಿರುವುದರಿಂದ ಬಹಳಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದು, ತಮಗೆ ಆಸಕ್ತಿದಾಯಕ ಕಾಂಬಿನೇಶನ್ ಆಯ್ಕೆ ಮಾಡಿ ಕೊಳ್ಳುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *