ನಮ್ಮ ಸಿಂಧನೂರು, ಆಗಸ್ಟ್ 20
ತುಂಗಭದ್ರಾ ಜಲಾಶಯಕ್ಕೆ ದಿನಾಂಕ:20-08-2024ಮಂಗಳವಾರದಂದು 31,033 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 10,201 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇಂದು 76.91 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 98.79 ಟಿಎಂಸಿ ನೀರು ಸಂಗ್ರಹವಿದ್ದರೆ, 706 ಕ್ಯೂಸೆಕ್ ನೀರು ಒಳಹರಿವಿತ್ತು, 10,207 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ಕಳೆದ ಆಗಸ್ಟ್ 10 ಶನಿವಾರದಂದು ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋದ ಕಾರಣ ಅಪಾರ ಪ್ರಮಾಣದ ನೀರನ್ನು ಜಲಾಶಯದ ಎಲ್ಲ ಗೇಟ್‌ಗಳಿಂದ ಹೊರಬಿಡಲಾಗಿತ್ತು. ಸ್ಟಾಪ್‌ಲಾಗ್ ಗೇಟ್ ಅಳವಡಿಸಿದ ನಂತರ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು, ಪುನಃ ಮತ್ತೊಮ್ಮೆ ಭರ್ತಿಯಾಗುವ ನಿರೀಕ್ಷೆಯಿದೆ.