ನಮ್ಮ ಸಿಂಧನೂರು, ಜೂನ್ 17
ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 17-06-2024 ಸೋಮವಾರ ದಂದು 944 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 6.07 ಟಿಎಂಸಿ ನೀರು ಸಂಗ್ರಹವಿದ್ದರೆ, 1244 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 4.84 ಟಿಎಂಸಿ ನೀರು ಸಂಗ್ರಹವಿದ್ದರೆ, 0 ಕ್ಯೂಸೆಕ್ ನೀರು ಒಳಹರಿವಿತ್ತು, 1075 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು.
ರಾಯಚೂರು ಜಿಲ್ಲೆಯಲ್ಲಿ ಕುಡಿವ ನೀರಿನ ಅಭಾವ ಹೆಚ್ಚಿದ್ದು, ಗಣೇಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಕುಸಿದಿರುವುದು ಸೇರಿದಂತೆ ಮಾನ್ವಿ ತಾಲೂಕಿನಲ್ಲಿ ನೀರಿನ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಜೂನ್ 15ರಿಂದ 25ರವರೆಗೆ 10 ದಿನಗಳ ಕಾಲ ಎಡದಂಡೆ ಮುಖ್ಯ ನಾಲೆಗೆ ನೀರು ಹರಿಬಿಡಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು 1244 ಕ್ಯೂಸೆಕ್ ನೀರು ಕಾಲುವೆ ಮೂಲಕ ಹರಿದು ಬರುತ್ತಿದೆ. ಈಗಾಗಲೇ ರಾಯಚೂರು ಜಿಲ್ಲಾಡಳಿತ ಎಲ್ಲ ಸ್ಥಳೀಯಾಡಳಿತಗಳಿಗೆ ತಮ್ಮ ತಮ್ಮ ವ್ಯಾಪ್ತಿಯ ಕುಡಿವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳುವಂತೆ ಸೂಚನೆ ನೀಡಲಾಗಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ನಾಲೆಗಳಿಗೆ ನೀರು ಹರಿವುದನ್ನೇ ಕಾಯ್ದು ಕುಳಿತಿದಿದ್ದಾರೆ.