ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 12, 2026
ಮಹಿಳಾ ಮುಖಂಡರ ಪೂರ್ವಭಾವಿ ಸಭೆ ಹಮ್ಮಿಕೊಳ್ಳುವ ಮೂಲಕ ಜೆಡಿಎಸ್ ಪಕ್ಷದ ಸಂಘಟನೆ ಬಲಪಡಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಶಾಸಕರ ನಿವಾಸದಲ್ಲಿ ನಗರದ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ನಡೆದ ಸಭೆ ಇದಕ್ಕೆ ಪುಷ್ಟಿ ನೀಡಿದೆ.
ಸಂಘಟನೆ ಗಟ್ಟಿಗೊಳಿಸಲು ಸಲಹೆ
ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರು ಪ್ರಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು, ಮುಂಬರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸುವುದು, ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ನಿಟ್ಟಿನಲ್ಲಿ ಮಹಿಳಾ ಮುಖಂಡರು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುವಂತೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು ಸಭೆಯಲ್ಲಿ ಕರೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ ಹಾಗೂ ಮಹಿಳಾ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಇದ್ದರು.
ಜುಲೈ 14ರಂದು ಜೆಡಿಎಸ್ನಿಂದ ಅಂಬಾಮಠಕ್ಕೆ ಪಾದಯಾತ್ರೆ
ಮಳೆಗಾಗಿ ಪ್ರಾರ್ಥಿಸಿ ಜೆಡಿಎಸ್ನಿಂದ ಜುಲೈ 14ರಂದು ಸುಕ್ಷೇತ್ರ ಅಂಬಾಮಠದ ಅಂಬಾದೇವಿ ದೇವಸ್ಥಾನಕ್ಕೆ ಪಾದಯಾತ್ರೆ ಹಮ್ಮಿಕೊಂಡಿರುವುದರಿಂದ, ಈ ಸಭೆಯಲ್ಲಿ ಪಾದಯಾತ್ರೆಯ ಕುರಿತು ವಿಸ್ತೃತವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

