ಸಿಂಧನೂರು : ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಗಸ್ಟ್ 16ರಂದು ಪ್ರತಿಭಾ ಪುರಸ್ಕಾರ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಅಗಸ್ಟ್ 05, 2026

ನಗರದ ಟೌನ್‌ಹಾಲ್‌ನಲ್ಲಿ ದಿನಾಂಕ: 16-08-2026ರಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಸಿಂಧನೂರು ಹಾಗೂ ಮಸ್ಕಿ ತಾಲ್ಲೂಕು ಸಮಿತಿ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಅಯ್ಯಪ್ಪ ಮಲ್ಲಾಪುರ ವಕೀಲರು ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಪ್ರತಿಭಾ ಸಾಮರ್ಥ್ಯ ಮೆರೆದ ಸಮುದಾಯದ ಸಿಂಧನೂರು ಮತ್ತು ಮಸ್ಕಿ ತಾಲ್ಲೂಕು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಅಂದು ಸಮುದಾಯದ ಗಣ್ಯರ ಸಮ್ಮುಖದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ 100ರಿಂದ 150ಕ್ಕೂ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಸಂಘಟನೆಯ ವತಿಯಿಂದ ಮೊಟ್ಟ ಮೊದಲ ಬಾರಿಗೆ ತಾಲ್ಲೂಕಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಚನ್ನಬಸವ, ಯಂಕಪ್ಪ ಗುತ್ತೇದಾರ, ಕುಬೇರಪ್ಪ, ವೀರೇಶ ಸುಲ್ತಾನಪುರ, ಶಂಕ್ರಪ್ಪ ಜಾಳಿಹಾಳ, ಯಮನೂರು ಸಿಳ್ಳಿ, ಮಲ್ಲೇಶ ಚನ್ನಳ್ಳಿ, ಹನುಮಂತಪ್ಪ ಹಾರಾಪುರ, ವೀರೇಶ, ಹನುಮಂತ ಮಲ್ಲಾಪುರ ಇನ್ನಿತರರಿದ್ದರು.


Spread the love

Leave a Reply

Your email address will not be published. Required fields are marked *