ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 7, 2026
ನಗರದ ಪಿಡಬ್ಲ್ಯುಡಿ ಕ್ಯಾಂಪಿನ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕರ ಕೊರತೆಯಿಂದ ಅಭ್ಯಾಸಕ್ಕೆ ಅನನುಕೂಲತೆ ಉಂಟಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವಿಸ್ತೃತ ವರದಿ ಪ್ರಕಟವಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದಿನಾಂಕ: 06-07-2026ರಂದು ರಾಯಚೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.
ಕೈಗೊಂಡ ಕ್ರಮದ ವರದಿಗೆ ಸೂಚನೆ
“ಕೂಡಲೇ ಕ್ರಮವಹಿಸಿ, ವಿದ್ಯಾರ್ಥಿಗಳಿಗೆ ತಮ್ಮ ದಿನ ನಿತ್ಯದ ಪಾಠ-ಪ್ರವಚನಗಳನ್ನು ಕೇಳಲು ಅನುಕೂಲವಾಗುವಂತೆ ತರಗತಿಯ ಕೊಠಡಿಗಳ ವ್ಯವಸ್ಥೆ ಮಾಡುವಲ್ಲಿ ಕ್ರಮವಹಿಸಿ ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ 7 ದಿನಗಳ ಒಳಗಾಗಿ ಸಲ್ಲಿಸುವಂತೆ” ನೋಟಿಸ್‌ನಲ್ಲಿ ತಿಳಿಸಿದೆ.
