ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 13
ನಗರದ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಪದವಿ ವಸತಿ ನಿಲಯಕ್ಕೆ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಹಾಸ್ಟೆಲ್ ವ್ಯವಸ್ಥೆ, ಕುಂದು-ಕೊರತೆ, ಅಗತ್ಯ ಸೌಲಭ್ಯ ಸೇರಿ ಹಲವು ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಸಿದರು.
“ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡಬೇಕು, ಸಿಬ್ಬಂದಿ ಗೈರು ಹಾಜರಾಗದೇ ಕೆಲಸದ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು, ಶೌಚಾಲಯ ಮತ್ತು ಗ್ರಂಥಾಲಯ ದುರಸ್ತಿ ಮಾಡಿಸಿ, ಯಾವುದೇ ರೀತಿಯ ಕೊರತೆ ಆಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ” ಎಂದು ವಾರ್ಡನ್‌ಗೆ ಎಮ್ಮೆಲ್ಸಿ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್, ಅಡುಗೆ ಸಹಾಯಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
