ಸಿಂಧನೂರು: ಜವಳಗೇರಾ ಸಿಎಸ್‌ಎಫ್‌ನಲ್ಲಿ ಕೇಂದ್ರೀಯ ಕೃಷಿ ವಿವಿ ಸ್ಥಾಪನೆಗೆ ಒತ್ತಾಯಿಸಿ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಕೇಂದ್ರ ಸಚಿವರಿಗೆ ಮನವಿ

Spread the love

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಫೆಬ್ರವರಿ 14

ತಾಲೂಕಿನ ಜವಳಗೇರಾ ಬಳಿಯಿರುವ ಸಿಎಸ್‌ಎಫ್ (ಸೆಂಟ್ರಲ್ ಸ್ಟೇಟ್ ಫಾರ್ಮ್)ನಲ್ಲಿ ಕೇಂದ್ರೀಯ ವಿಶ್ವ ವಿದ್ಯಾಲಯ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ನವ ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಕಮಲೇಶ್ ಪಾಶ್ವಾನ್ ಅವರಿಗೆ ಪ್ರಸ್ತಾವನೆಯನ್ನು ಸಲ್ಲಿಸುವ ಮೂಲಕ ಮನವಿ ಮಾಡಿದ್ದಾರೆ.
ಜವಳಗೇರಾ ಸಿಎಸ್‌ಎಫ್ ವ್ಯಾಪ್ತಿಯಲ್ಲಿ 7600 ಎಕರೆ ಜಮೀನು ಇದ್ದು, ಈ ಜಮೀನನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಇದುವರೆಗೂ ಕೆಲಸಗಳಾಗಿಲ್ಲ, ಹಾಗಾಗಿ ಕೇಂದ್ರೀಯ ವಿವಿ ಸ್ಥಾಪನೆಯಿಂದ ಈ ಭಾಗದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ ಎಂಬ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ. ಇದಕ್ಕೆ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆAದು ಹೇಳಲಾಗಿದೆ.


Spread the love

Leave a Reply

Your email address will not be published. Required fields are marked *