ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು ಜೂನ್ 29, 2026
ನಗರದ ವಾರ್ಡ್ವೊಂದರಲ್ಲಿ ಇತ್ತೀಚಿಗೆ ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ದುಷ್ಕರ್ಮಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ, ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ದಿನಾಂಕ: 30-06-2026 ಮಂಗಳವಾರದAದು ತಹಸಿಲ್ ಕಾರ್ಯಾಲಯದ ಮುಂದೆ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸೇರಿದಂತೆ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪನ್ಯಾಸಕರು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
