ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 14
ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ನಗರದ ‘ಜನಸ್ಪಂದನ’ ಕಾರ್ಯಾಲಯದಲ್ಲಿ ಸೋಮವಾರ ಕೃಷಿ ಅಧಿಕಾರಿಗಳ, ಕೃಷಿ ಪರಿಕರ ಮಾರಾಟಗಾರರ ಮತ್ತು ರಸಗೊಬ್ಬರ ಸರಬರಾಜು ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಯಿತು.
‘ಸರ್ಕಾರ ನಿಗದಿಪಡಿಸಿದ ದರದಲ್ಲಿ ಗೊಬ್ಬರ ಮಾರಾಟ ಮಾಡಿ’
ಸಭೆಯ ಆರಂಭದಲ್ಲಿ ಅಧಿಕಾರಿಗಳಿಂದ ತಾಲೂಕಿನ ಕೃಷಿ ಬೆಳೆಗಳ ಬಗ್ಗೆ ವಿಸ್ತೃತ ಮಾಹಿತಿ ಪಡೆದ ಎಮ್ಮೆಲ್ಸಿ ಅವರು, ಸರ್ಕಾರ ನಿಗದಿಪಡಿಸಿದ ದರದಲ್ಲಿ ಬೀಜ, ರಸಗೊಬ್ಬರ ಪೂರೈಕೆ ಮಾಡಬೇಕು. ಯಾವುದೇ ರೀತಿಯಲ್ಲಿ ಬೀಜ, ರಸಗೊಬ್ಬರ ಕೊರತೆಯಾಗದಂತೆ ನಿಗಾವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ್ ಚೌಹಾಣ್, ನಹೀಂ ಹುಸೇನ್ ಡಿಡಿಎ, ಎಡಿಎ ಮಲ್ಲಿಕಾರ್ಜುನ್, ರಾಸಾಯನಿಕ ರಸಗೊಬ್ಬರ ಮಾರಾಟಗಾರರ ಸಂಘದ ಅಧ್ಯಕ ಭೀಮನಗೌಡ ನೆಟೆಕಲ್ ಗೊರೆಬಾಳ, ಕೃಷಿಕ ಸಮಾಜ ಅಧ್ಯಕ್ಷ ಹೊನ್ನನಗೌಡ ಬೆಳಗುರ್ಕಿ, ವಿವಿಧ ರೈತ ಸಂಪರ್ಕ ಕೇಂದ್ರದ ಸಹಾಯಕ ಅಧಿಕಾರಿಗಳು, ತಾಲೂಕಿನ ಕೃಷಿ ಪರಿಕರ ಮಾರಾಟಗಾರರು, ರಸಗೊಬ್ಬರ ಸರಬರಾಜು ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.
