ನಮ್ಮ ಸಿಂಧನೂರು, ಸೆಪ್ಟೆಂಬರ್ 04
ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನಗರದ ಜನಸ್ಪಂದನ ಕಾರ್ಯಾಲಯದಲ್ಲಿ ಸಾರ್ವಜನಿಕ ಆಸ್ಪತ್ರೆ ವೈದ್ಯರು, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರ ಸಭೆ ಬುಧವಾರ ನಡೆಯಿತು. ಸಭೆಯಲ್ಲಿ ಆಯಾ ಆಸ್ಪತ್ರೆಗಳ ಕುರಿತು ಮಾಹಿತಿ ಪಡೆಯಲಾಯಿತು. ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ದೊರೆಯಬೇಕಾದ ಅನುಕೂಲತೆಗಳು ಸೇರಿದಂತೆ ಇನ್ನಿತರೆ ಹಲವು ಮಹತ್ವದ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ, ಸಾರ್ವಜನಿಕ ಆಸ್ಪತ್ರೆಯ ಡಾ.ಹನುಮಂತರೆಡ್ಡಿ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ಸೇರಿದಂತೆ ಇನ್ನಿತರರು ಇದ್ದರು.