ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 12
ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಬುಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ, ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಹಾಗೂ ನಗರಸಭೆ ಹಂಗಾಮಿ ಅಧ್ಯಕ್ಷೆ ಮಂಜುಳಾ ಪ್ರಭುರಾಜ ಅವರು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಶನಿವಾರ ಮನವಿಪತ್ರ ಸಲ್ಲಿಸಿ ಒತ್ತಾಯಿಸಿದರು.
“ರಾಯಚೂರು ಜಿಲ್ಲೆಯಲ್ಲಿ ಸಿಂಧನೂರು ತಾಲೂಕು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ತಾಲೂಕಿನಲ್ಲಿ ವಿವಿಧ ಕೈಗಾರಿಕೆ ಘಟಕಗಳು, ರೈಸ್‌ಮಿಲ್‌ಗಳು, ಟ್ರಾö್ಯಕ್ಟರ್ ಶೋರೂಂಗಳು, ಆಟೊ ಮೊಬೈಲ್ಸ್ ಹೆಚ್ಚಿನ ಪ್ರಮಾಣದಲ್ಲಿದ್ದು, ಸಿಂಧನೂರು ನಗರವು ಪ್ರಮುಖ ನಗರಗಳಿಗೆ ಹಾದುಹೋಗಲು ಕೇಂದ್ರ ಸ್ಥಾನವಾಗಿದೆ. ಹಾಗಾಗಿ ಸರಕುಗಳನ್ನು ಸಾಗಿಸಲು ಹಾಗೂ ಪ್ರಯಾಣಿಕರು ಉದ್ದೇಶಿತ ಸ್ಥಳಗಳಿಗೆ ಪ್ರಯಾಣಿಸಲು ಮುಂಗಡ ಬುಕಿಂಗ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಎಮ್ಮೆಲ್ಸಿ ಬಾದರ್ಲಿ ಅವರು ಕೇಂದ್ರ ಸಚಿವರ ಗಮನ ಸೆಳೆದಿದ್ದಾರೆ.
ಗಂಗಾವತಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಬುಕ್ಕಿಂಗ್ ಕೌಂಟರ್ ಇದ್ದು, ಸಿಂಧನೂರು ರೈಲ್ವೆ ನಿಲ್ದಾಣದಲ್ಲಿಯೂ ಸಹ ಮುಂಗಡ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಮಾಡುವಂತೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ನಗರಸಭೆ ಹಂಗಾಮಿ ಅಧ್ಯಕ್ಷೆ ಮಂಜುಳಾ ಪ್ರಭುರಾಜ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.