ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಮಾರ್ಚ್ 26
ಖರೀದಿ ಕೇಂದ್ರಗಳಲ್ಲಿ ದಿನವೂ ಹೆಚ್ಚಿನ ಪ್ರಮಾಣದಲ್ಲಿ ಜೋಳ ಖರೀದಿಸುವ ಮೂಲಕ ಖರೀದಿ ಪ್ರಕ್ರಿಯೆ ಚುರುಕುಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಮ್ಮ ಜನಸ್ಪಂದನ ಕಾರ್ಯಾಲಯದಲ್ಲಿ ಕರೆದಿದ್ದ ನೋಡಲ್ ಅಧಿಕಾರಿಗಳ ಸಭೆಯಲ್ಲಿ, ಬೆಂಬಲ ಬೆಲೆ ಯೋಜನೆ ಅಡಿ ಜೋಳ ಖರೀದಿ ಪ್ರಕ್ರಿಯೆ ಆರಂಭವಾಗಿದ್ದು, ಆದಷ್ಟು ಶೀಘ್ರ ಗತಿಯಲ್ಲಿ ಖರೀದಿ ಪ್ರಕ್ರಿಯೆ ನಡೆಸಬೇಕು. ಯಾವುದೇ ರೀತಿಯ ವಿಳಂಬವಾಗದAತೆ ಕಾಳಜಿವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು. ನಂತರ ಕೆಲವೊತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.