ನಮ್ಮ ಸಿಂಧನೂರು, ನವೆಂಬರ್ 9
ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಾಂಕ: 21-10-2024ರಂದು ಆರ್.ಎಚ್. ಕ್ಯಾಂಪ್-3ರ ಮಹಿಳೆ ಮೌಸಂಬಿ ಮಹೇಶ್ವರ ಮಂಡಲ್ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಿ ಕಾನೂನು ರೀತ್ಯ ಕ್ರಮ ಜರುಗಿಸಬೇಕು ಹಾಗೂ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ಒತ್ತಾಯಿಸಿ, ನಮ್ಮ ಕರ್ನಾಟಕ ಸೇನೆ ವತಿಯಿಂದ ನಗರದ ತಹಸಿಲ್ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರಿಯಿತು.
ಈ ಸಂದರ್ಭದಲ್ಲಿ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಉಮೇಶಗೌಡ ಅರಳಹಳ್ಳಿ, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ, ಸೇನೆಯ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ, ಜಿಲ್ಲಾ ಸಂಚಾಲಕ ಹುಸೇನ್ ಭಾಷಾ ಇಂದಿರಾನಗರ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬೂದೇಶ ಮರಾಠ, ತಾಲೂಕು ಉಪಾಧ್ಯಕ್ಷ ಗದ್ದೆಪ್ಪ, ಸದ್ದಾಂ, ಎಂ.ಡಿ.ನಬಿ, ಮಲ್ಲಿಕಾರ್ಜುನ, ಅಬ್ದುಲ್ ನಬಿ, ಮಹ್ಮದ್ ಸಾಬ್ ಚಿಟಗಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಹನುಮಂತ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪಾವನಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.