ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ನವೆಂಬರ್ 9
ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಬ್ಬರು ಪ್ರಸೂತಿ ವೈದ್ಯರ ರಜೆಯಿಂದಾಗಿ ಹೆರಿಗೆ ವಿಭಾಗದಲ್ಲಿ ಅಯೋಮಯ ವಾತಾವರಣ ಸೃಷ್ಟಿಯಾಗಿದ್ದು, ಗರ್ಭಿಣಿಯರು, ಬಾಣಂತಿಯರುಆಸ್ಪತ್ರೆಗೆ ಬಂದು ವಾಪಸ್ ಹೋಗುತ್ತಿದ್ದಾರೆ. ಈ ನಡುವೆ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಶುಕ್ರವಾರ ತಹಸಿಲ್ ಕಾರ್ಯಾಲಯದ ಮುಂದೆ ಹೋರಾಟ ಅನಿರ್ದಿಷ್ಟ ಹೋರಾಟ ಆರಂಭವಾಗಿದ್ದರೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಇತ್ತ ತಿರುಗಿಯೂ ನೋಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಿನವೂ ಆಸ್ಪತ್ರೆಯಲ್ಲಿ 200ಕ್ಕೂ ಹೆಚ್ಚು ಮಹಿಳೆಯರು ಹೊರರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಾರೆ. ಪ್ರತಿ ತಿಂಗಳು ಅಂದಾಜು 300ಕ್ಕೂ ಹೆಚ್ಚು ಹೆರಿಗಳಾಗುತ್ತವೆ ಎಂದು ಹೇಳಲಾಗುತ್ತದೆ. ಮಹಿಳಾ ರೋಗಿಗಳಿಗೆ ತಕ್ಕಂತೆ ಅಗತ್ಯ ತಜ್ಞ ವೈದ್ಯ ಸಿಬ್ಬಂದಿ ಇಲ್ಲದ ಕಾರಣ ಗರ್ಭಿಣಿಯರು, ಬಾಣಂತಿಯರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆಸ್ಪತ್ರೆಗೆ ಬಂದ ರೋಗಿಗಳು ದೂರುತ್ತಾರೆ.
ಇಬ್ಬರು ಪ್ರಸೂತಿ ತಜ್ಞ ವೈದ್ಯರ ರಜೆ, ಚಿಕಿತ್ಸೆಗಾಗಿ ಬಳ್ಳಾರಿ, ರಾಯಚೂರು ಆಸ್ಪತ್ರೆಗೆ ಅಲೆದಾಟ
ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಬ್ಬ ಪುರುಷ, ಒಬ್ಬ ಮಹಿಳಾ ಪ್ರಸೂತಿ ತಜ್ಞರು ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರು ತಜ್ಞ ವೈದ್ಯರು ಕಳೆದ 15 ದಿನಗಳಿಂದ ರಜೆ ಹಾಕಿರುವುದರಿಂದ ಹೆರಿಗೆ ವಿಭಾಗದಲ್ಲಿ ಅಯೋಮಯ ವಾತಾವರಣ ನಿರ್ಮಾಣವಾಗಿದೆ. ಗುತ್ತಿಗೆ ಆಧಾರದಲ್ಲಿ ಮತ್ತೊಬ್ಬ ಮಹಿಳಾ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಹೆರಿಗೆ ಕೇಸ್‌ಗಳ ಸಂಖ್ಯೆ ಹೆಚ್ಚಿರುವುದರಿಂದ ನಿರ್ವಹಿಸಲು ಆಗುತ್ತಿಲ್ಲ. ಸಾಮಾನ್ಯ ಹೆರಿಗೆಯನ್ನಷ್ಟೇ ನಿರ್ವಹಿಸಿ, ಶಸ್ತç ಚಿಕಿತ್ಸೆ ಇಲ್ಲವೇ ಗಂಭೀರ ಸಮಸ್ಯೆಗಳಿದ್ದಲ್ಲಿ ರೋಗಿಯ ಕಡೆಯವರಿಗೆ ಅಥವಾ ಹೆರಿಗೆಗಾಗಿ ಕರೆತಂದ ಮಹಿಳೆಯರ ಕಡೆಯವರಿಗೆ ರಾಯಚೂರಿನ ರಿಮ್ಸ್ ಹಾಗೂ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಹೋಗುವಂತೆ ಹೇಳಿ, ಅಲ್ಲಿಗೆ ಶಿಫಾರಸು ಮಾಡಿ ಕೈತೊಳೆದುಕೊಳ್ಳಲಾಗುತ್ತಿದೆ. ನಗರದಲ್ಲಿ ತಾಲೂಕು ಆಸ್ಪತ್ರೆ ಇದ್ದರೂ ಮಹಿಳೆಯರ ಪಾಲಿಗೆ ಇಲ್ಲದಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ
‘ಒಳ್ಳಿ ನೋಡದ ಡಿಎಚ್‌ಒ”
ಸಿಂಧನೂರು ತಾಲೂಕು ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚೆಚ್ಚು ರೋಗಿಗಳು ಸಮಸ್ಯೆ ಅನುಭವಿಸುತ್ತಿದ್ದರೂ ರಾಯಚೂರು ಡಿಎಚ್‌ಒ ಮಾತ್ರ ಆಸ್ಪತ್ರೆಗೆ ಭೇಟಿ ನೀಡಿ, ಲೋಪಗಳನ್ನು ಪತ್ತೆಹಚ್ಚಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಂಡು, ಕೊರತೆ ಇರುವ ವಿಭಾಗಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ನೇಮಕಕ್ಕೆ ಮುಂದಾಗದೇ ದಿವ್ಯ ನಿರ್ಲಕ್ಷö್ಯವಹಿಸಿದ್ದಾರೆ ಎಂದು ನಮ್ಮ ಕರ್ನಾಟಕ ಸೇನೆಯ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಆರೋಪಿಸಿದ್ದಾರೆ.