ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಮಾರ್ಚ್ 26
ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ನಗರ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಬುಧವಾರ ಮಧ್ಯಾಹ್ನ ಶಾಂತಿ ಸಭೆ ನಡೆಯಿತು. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್‌ಪಿ ಬಿ.ಎಸ್.ತಳವಾರ, ಸರ್ವ ಸಮುದಾಯಗಳು ಶಾಂತಿ, ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸುವ ಮೂಲಕ ಸಹಬಾಳ್ವೆಯ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಸಲಹೆ ನೀಡಿದರು. ಪಿಎಸ್‌ಐ ದುರ್ಗಪ್ಪ ಡಿ ಮಾತನಾಡಿದರು. ಈದ್ಗಾ ಕಮಿಟಿ ಅಧ್ಯಕ್ಷ ಹಾರೂನ್‌ಸಾಬ್ ಜಾಗಿರದಾರ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ವೈ.ನರೇಂದ್ರನಾಥ ಸೇರಿದಂತೆ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.