ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 10
ಕರ್ನಾಟಕ ರಾಜ್ಯ ದಲಿತ ಸಂಘರ್ಷ ರಾಜ್ಯ ಸಮಿತಿ ವತಿಯಿಂದ, ಬುದ್ಧಿಸ್ಟ್ ಅಕಾಡೆಮಿ ಆಫ್ ಪರ್ಫಾಮಿಂಗ್ ಆರ್ಟ್ಸ್, ನಾಗಪುರ ಅವರು ನಡೆಸುವ ಸಾಮ್ರಾಟ್ ಅಶೋಕ ಚಕ್ರವರ್ತಿ ಜೀವನ ಆಧಾರಿತ ‘ಮಹಾನಾಯಕ ಸಾಮ್ರಾಟ್ ಅಶೋಕ’ ನಾಟಕ ಜುಲೈ 13ರಂದು ಬೆಂಗಳೂರಿನ ವಸಂತನಗರದ ಕಂಟೋನ್ಮೆಂಟ್ ರೈಲ್ವೆ ಸ್ಟೇಶನ್ ಸಮೀಪದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರದರ್ಶನವಾಗಲಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗಾಂಧಿನಗರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಅಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ತದನಂತರ ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ಅಶೋಕ ಜಾಂಬುಲ್ಕರ್ ನಾಗಪುರ ಪರಿಕಲ್ಪನೆ ಮತ್ತು ನಿರ್ದೇಶನ ಹಾಗೂ ಎ.ವಂದನಾ ಜಾಂಬುಲ್ಕರ್ ನಾಗಪುರ ನಿರ್ಮಾಣದ ನಾಟಕ ಪ್ರದರ್ಶನಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ಸಂಘಟನೆಯ ರಾಜ್ಯ ಮುಖಂಡರಾದ ಡಿ.ಜಿ.ಸಾಗರ್ ಅವರು ಪಾಲ್ಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಯ ಕಾರ್ಯಕರ್ತರು ಹಾಗೂ ಆಸಕ್ತರು ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.