ಸಿಂಧನೂರು: ಜೂನ್ 1ರಂದು ಬೆಳಿಗ್ಗೆ 10 ರಿಂದ 2 ಗಂಟೆವರೆಗೆ ಪವರ್ ಕಟ್

Spread the love

ನಮ್ಮ ಸಿಂಧನೂರು, ಮೇ 31
ನಗರದಲ್ಲಿ ಜೂನ್ 1 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 110/11 ಕೆ.ವಿ. ವಿದ್ಯುತ್ ಉಪ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಮತ್ತು 11 ಕೆ.ವಿ.ಬ್ರೇಕರ್‌ಗಳನ್ನು ಅಳವಡಿಸುವ ಕೆಲಸ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಗರದ ಪಿಡಬ್ಲ್ಯುಡಿ ಕ್ಯಾಂಪ್ ಹೊರತುಪಡಿಸಿ, ನಗರ ಮತ್ತು ಡಿಎನ್‌ಜೆವೈ ಫೀಡರ್ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂದಾಜು 4 ತಾಸು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *