ಸಿಂಧನೂರು: ಕೊಲ್ಕೊತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಪ್ರತಿಭಟನೆ

Spread the love

ನಮ್ಮ ಸಿಂಧನೂರು, ಆಗಸ್ಟ್ 19
ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕೊತ್ತಾದ ರಾಧಾ ಗೋವಿಂದ ಕರ್ ಸರ್ಕಾರಿ ಆಸ್ಪತ್ರೆಯಲ್ಲಿ ಆಗಸ್ಟ್ 9 ರಂದು ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ದುಷ್ಕೃತ್ಯ ಖಂಡಿಸಿ, ಈ ಘಟನೆಗೆ ಕಾರಣರಾದವರ ಮೇಲೆ ಅತ್ಯುಗ್ರ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ, ಮಹಿಳಾ ಸಂಘಟನೆಗಳ ಒಕ್ಕೂಟ ಹಾಗೂ ಮನುಜಮತ ಬಳಗದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟçಪತಿಗಳಿಗೆ ಸೋಮವಾರ ಮನವಿ ರವಾನಿಸಲಾಯಿತು.
ನಗರದ ಪ್ರವಾಸಿದ ಮಂದಿರದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು “ನಿಲ್ಲಿಸಿ ನಿಲ್ಲಿಸಿ ಅತ್ಯಾಚಾರ ನಿಲ್ಲಿಸಿ”, “ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ” ಎಂದು ಘೋಷಣೆಗಳನ್ನು ಕೂಗಿದರು. ಇಂತಹ ದುಷ್ಕೃತ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯವೇ ಕಾರಣ ಎಂದು ಧಿಕ್ಕಾರ ಹಾಕಿದರು.

Namma Sindhanuru Click For Breaking & Local News

ಮಹಿಳೆಯರಿಗೆ ಎಲ್ಲಿ ರಕ್ಷಣೆ ಇದೆ ?
ಮಹಿಳಾ ಮುಖಂಡರಾದ ಸರಸ್ವತಿ ಪಾಟೀಲ್ ಮಾತನಾಡಿ, ಮಹಿಳೆಯರಿಗೆ ಸಾರ್ವಜನಿಕ ಸ್ಥಳಗಳಲ್ಲಿ, ಬಸ್‌ನಲ್ಲಿ, ರೈಲ್ವೆಯಲ್ಲಿ ಕೊನೆಗೆ ಮನೆಯಲ್ಲೂ ರಕ್ಷಣೆ ಇಲ್ಲ. ಹಾಗಾದರೆ ಯಾವ ಆಧಾರದ ಮೇಲೆ ಆಕೆ ಬದುಕಬೇಕು. ಪ್ರತಿಬಾರಿ ಇಂತಹ ಘಟನೆಗಳಾದಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಿ ಹೋಗುವುದೇ ಆಗಿದೆ. ಹಾಗಾದರೆ ಈ ಸರ್ಕಾರಗಳು ಎಚ್ಚೆತ್ತುಕೊಳ್ಳುವುದು ಯಾವಾಗ ? ಇನ್ನುಮುಂದೆ ಮಹಿಳೆಯರೇ ಬೀದಿಗಿಳಿದು ಹೋರಾಟ ಮಾಡುವ ಮೂಲಕ ತಪ್ಪಿತಸ್ಥರಿಗೆ ತಕ್ಕಪಾಠ ಕಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Namma Sindhanuru Click For Breaking & Local News

ಪ್ರಕರಣ ಮುಚ್ಚಿಹಾಕಲು ಹುನ್ನಾರ
ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್.ಕಂಬಳಿ ಮಾತನಾಡಿ, ಕೊಲ್ಕೊತ್ತಾದ ಆರ್.ಜಿ.ಕರ್ ಸರ್ಕಾರಿ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಕರ್ತವ್ಯದಲ್ಲಿದ್ದಾಗಲೇ ಸಾಮೂಹಿಕ ಅತ್ಯಾಚಾರ ನಡೆಸಿ, ಹಿಂಸಿಸಿ ಕೊಲೆ ಮಾಡಲಾಗಿದೆ ಎಂದು ವಿದ್ಯಾರ್ಥಿನಿಯ ಪಾಲಕರು ಕೊಲ್ಕೊತ್ತಾ ಹೈಕೋರ್ಟ್ಗೆ ಹೇಳಿಕೆ ನೀಡಿದ್ದಾರೆ. ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯಕ್ಕಾಗಿ ಆಸ್ಪತ್ರೆಯ ವೈದ್ಯರು, ಆರೋಗ್ಯ ಕಾರ್ಯಕರ್ತರು ಹೋರಾಟ ನಡೆಸಿದ ಸಂದರ್ಭದಲ್ಲೇ, ಕೆಲವರು ಏಕಾಏಕಿ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿ, ದುಷ್ಕೃತ್ಯ ನಡೆದ ಆಸ್ಪತ್ರೆಯ ಕೊಠಡಿಯಲ್ಲಿನ ಆರೋಗ್ಯ ಸಲಕರಣೆಗಳು, ಔಷಧಗಳನ್ನು ನಾಶಪಡಿಸಿರುವುದು ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕುವ ಸಂಚಾಗಿದೆ ಎಂದು ಆಪಾದಿಸಿದರು.
ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಾಗಲಿ
ಉಪನ್ಯಾಸಕಿ ವಿಜಯಲಕ್ಷ್ಮಿ ಗುರಿಕಾರ ಮಾತನಾಡಿ, ಈಗಾಗಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ. ಪ್ರಕರಣ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ದೇಶದ ಬಹುತೇಕ ಆಸ್ಪತ್ರೆಗಳು, ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ರಾಷ್ಟçವ್ಯಾಪಿ ಮುಷ್ಕರ ನಡೆಸಿ ಪ್ರತಿರೋಧ ದಾಖಲಿಸಿದ್ದಾರೆ. ಪ್ರಕರಣದ ತೀವ್ರತೆಯನ್ನು ಅರಿತ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಆಗಸ್ಟ್ 20ರಂದು ವಿಚಾರಣೆ ಕೈಗೆತ್ತಿಕೊಂಡಿದೆ. ಇನ್ನಾದರೂ ಈ ಪ್ರಕರಣದಲ್ಲಿ ಭಾಗಿಯಾದವರಿಗೆ ಗಲ್ಲು ಶಿಕ್ಷೆಯಾಗಲಿ ಎಂದು ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರವನ್ನು ಆಗ್ರಹಿಸಿದರು.

Namma Sindhanuru Click For Breaking & Local News

ಕಾಯ್ದೆ ಜಾರಿಯಲ್ಲಿ ನಿರ್ಲಕ್ಷ್ಯ
ಆಮಾಅತೆ ಮುಸ್ಲಿಂ ಹಿಂದ್‌ನ ಮುಖಂಡ ಹುಸೇನ್‌ಸಾಬ್ ಮಾತನಾಡಿ, ದೇಶದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ, ಅತ್ಯಾಚಾರ, ಕೊಲೆ ಹಾಗೂ ಕೌಟುಂಬಿಕ ದೌರ್ಜನ್ಯಗಳು ಹೆಚ್ಚುತ್ತಿದ್ದರೂ ಆಡಳಿತಾರೂಢ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಸಂಪೂರ್ಣ ನಿರ್ಲಕ್ಷö್ಯವಹಿಸಿವೆ. ಜಾಗತೀಕರಣ, ಖಾಸಗೀಕರಣ ಹಾಗೂ ಉದಾರೀಕರಣವನ್ನು ಅಪ್ಪಿಕೊಂಡಿರುವ ಸರ್ಕಾರಗಳು ಜಾರಿಗೊಳಿಸಿದ ಮಹಿಳಾ ವಿರೋಧಿ ನೀತಿಗಳು, ವಿಳಂಬ ನ್ಯಾಯ ಹಾಗೂ ಲಿಂಗ ತಾರತಮ್ಯವೇ ಇದಕ್ಕೆ ಕಾರಣವಾಗಿದೆ. ಉದ್ಯೋಗದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ವಿಶಾಖಾ ಮಾರ್ಗಸೂಚಿ ಪ್ರಕಾರ ‘ಪಾಶ್-2013 ಕಾಯಿದೆ’ ಜಾರಿಗೆ ತಂದಿದ್ದರೂ ಸಮರ್ಪಕ ಅನುಷ್ಠಾನ ಆಗಿಲ್ಲ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ 2013ರಲ್ಲಿ ಜಾರಿಗೆ ತಂದ ‘ನಿರ್ಭಯಾ ಕಾಯ್ದೆ’ಯ ನಂತರವೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಮಿತಿ ಮೀರಿದ್ದು, ಮಹಿಳೆಯರ ಸುರಕ್ಷತೆ, ಭದ್ರತೆಗೆ ಆಪತ್ತು ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

Namma Sindhanuru Click For Breaking & Local News

ಬೇಡಿಕೆಗಳು
ಕೋಲ್ಕತ್ತಾದ ಆರ್.ಜಿ.ಕರ್ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅಮಾನುಷವಾಗಿ ಕೊಲೆ ಮಾಡಿದವರನ್ನು ಕೂಡಲೇ ಪತ್ತೆಹಚ್ಚಿ ಅತ್ಯುಗ್ರ ಶಿಕ್ಷೆ ವಿಧಿಸಬೇಕು, ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಘಟನೆಯನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ನಿರ್ವಹಿಸಲು ಪಾಸ್ಟ್ಟ್ರಾö್ಯಕ್ ಕೋರ್ಟ್ಗಳನ್ನು ಸ್ಥಾಪಿಸಿ ವಿಳಂಬ ಧೋರಣೆ ಅನುಸರಿಸದೇ ಅಪರಾಧಿಗಳಿಗೆ ಶಿಕ್ಷೆ ವಿಧಿಸಬೇಕು, ಮಹಿಳೆಯರು ಕೆಲಸದ ಸ್ಥಳಗಳಲ್ಲಿ ಸುರಕ್ಷತೆ ಮತ್ತು ಭದ್ರತೆ ಒದಗಿಸಲು ವಿಶಾಖಾ ಮಾರ್ಗಸೂಚಿ ಪ್ರಕಾರ ಜಾರಿಗೆ ತಂದಿರುವ ‘ಪಾಶ್-2013 ಕಾಯಿದೆ’ಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು, ನಿರ್ಭಯಾ ಕಾಯ್ದೆ-೨೦೧೩ ಅನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು, ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರ ಮನೋಬಲ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಭದ್ರತೆ ಹಾಗೂ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂಬ ಬೇಡಿಕೆಗಳುಳ್ಳ ಮನವಿಪತ್ರವನ್ನು ರಾಷ್ಟ್ರಪತಿಗಳಿಗೆ ರವಾನಿಸಲಾಯಿತು.
ಈ ಸಂದರ್ಭದಲ್ಲಿ ವಚನ ಸಾಹಿತ್ಯ ಪರಿಷತ್ ಅಧ್ಯಕ್ಷೆ ಜಿ.ದೇವೀರಮ್ಮ, ಜನವಾದಿ ಮಹಿಳಾ ಸಂಘಟನೆಯ ಶಕುಂತಲಾ ಪಾಟೀಲ್, ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್‌ನ ಜಿಲ್ಲಾಧ್ಯಕ್ಷೆ ಸುಲೋಚನಾ, ಸಾವಿತ್ರಿ, ಶಾರದಾ, ಯಮನಮ್ಮ, ಆದಿಲಕ್ಷಿö್ಮ, ತಬಸ್ಸುಮ್ ಎಂ, ರೆಹನಾ ಬೇಗಂ, ಶಮೀನಾ, ಶಾಹೇದಾ, ನಾಜಿಯಾ ಫರ್ವಿನ್, ಶಬನಾಜ್ ಬೇಗಂ, ಪದ್ಮಾವತಿ, ವಿಜಯಲಕ್ಷಿö್ಮ, ನಾಗಲಕ್ಷಿö್ಮ, ರಾಜ್ಯ ಮಹಿಳಾ ಒಕ್ಕೂಟದ ಶಿವಮ್ಮ, ಅನ್ನಪೂರ್ಣ, ಈರಮ್ಮ, ಜಯಮ್ಮ, ಮಂಜಮ್ಮ, ದುರುಗಮ್ಮ, ಅಮರಮ್ಮ ಸುಕಾಲಪೇಟೆ, ಮರಿಯಮ್ಮ, ಇಂದ್ರಮ್ಮ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಚಂದ್ರಶೇಖರ ಗೊರಬಾಳ, ಬಸವರಾಜ ಬಾದರ್ಲಿ, ಕೃಷ್ಣಮೂರ್ತಿ, ದೇವೇಂದ್ರಗೌಡ, ಬಸವರಾಜ ಹಸಮಕಲ್, ಶರ್ಫುದ್ದೀನ್ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.


Spread the love

Leave a Reply

Your email address will not be published. Required fields are marked *