ಸಿಂಧನೂರು: ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Spread the love

ನಮ್ಮ ಸಿಂಧನೂರು, ಮೇ 20
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಬರ್ಬರ ಕೊಲೆ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಒತ್ತಾಯಿಸಿ, ರಾಜ್ಯದಲ್ಲಿ ಯುವತಿಯರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಸರಣಿ ಕೊಲೆ, ಅತ್ಯಾಚಾರ, ದೌರ್ಜನ್ಯ ಹಾಗೂ ದುಷ್ಕೃತ್ಯಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಬಾಧಿತರಿಗೆ ಸೂಕ್ತ ರಕ್ಷಣೆ ಒದಗಿಸಲು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ರವಾನಿಸಲಾಯಿತು.

Namma Sindhanuru Click For Breaking & Local News

ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಯುವತಿಯರು ಹಾಗೂ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ದುಷ್ಕೃತ್ಯಗಳು ನಡೆಯುತ್ತಿದ್ದು, ದುಷ್ಕರ್ಮಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಹಾಡಹಗಲೇ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಬರ್ಬರವಾಗಿ ಕೊಲೆ ಮಾಡಿದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಘಟನೆ ಇನ್ನೂ ಹಸಿಯಾಗಿರುವಾಗಲೇ ಅದೇ ಹುಬ್ಬಳ್ಳಿಯಲ್ಲಿ ಅಂತದ್ದೇ ಇನ್ನೊಂದು ದೃಷ್ಕೃತ್ಯ ನಡೆದಿದ್ದು, ಅಂಜಲಿ ಅಂಬಿಗೇರ್ ಅವರನ್ನು ಉಳಿಸಿಕೊಳ್ಳುವಲ್ಲಿ ಪೊಲೀಸ ವ್ಯವಸ್ಥೆ ವಿಫಲವಾಗಿದೆ. ಇನ್ನು ಕೊಡಗಿನಲ್ಲಿ ಮೀನಾ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಯೊಬ್ಬ ಆಕೆಯ ರುಂಡವನ್ನೇ ಕಡಿದು ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನಲ್ಲಿ ಲೇಖಕಿ ಕೆ.ಆರ್.ಸೌಮ್ಯಾ ಅವರ ಮಗಳು ಹಾಗೂ ಬಿಬಿಎ ವಿದ್ಯಾರ್ಥಿನಿ ಪ್ರುಬುಧ್ಯಾ ಎಂಬ ಯುವತಿ ಕುತ್ತಿಗೆ ಕೊಯ್ಯಲಾಗಿದೆ. ತುಮಕೂರಿನಲ್ಲಿ ರುಕ್ಸಾನ ಎಂಬ ಯುವತಿಯ ಬರ್ಬರವಾಗಿ ಕೊಲೆಗೀಡಾಗಿದ್ದಾಳೆ. ಹೀಗೆ ಸಾಲು ಸಾಲು ಸರಣಿ ಹತ್ಯೆಗಳು ನಡೆದಿದ್ದು, ಈ ಎಲ್ಲ ದುಷ್ಕೃತ್ಯಗಳು ಸಾರ್ವಜನಿಕರಲ್ಲಿ ಭಯ ಮತ್ತು ಆತಂಕವನ್ನು ಸೃಷ್ಟಿಮಾಡಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Namma Sindhanuru Click For Breaking & Local News

ʼಪ್ರಜ್ವಲ್‌ ರೇವಣ್ಣನನ್ನು ಬಂಧಿಸಿʼ
ಹಾಸನದ ಪೆನ್‌ ಡ್ರೈವ್ ಪ್ರಕರಣದಿಂದ ಮಹಿಳೆಯರ ಮಾನ, ಪ್ರಾಣ ಹಾಗೂ ಘನತೆಯ ಬದುಕಿಗೆ ಧಕ್ಕೆಯಾಗಿದ್ದು, ಸಂತ್ರಸ್ತ ಮಹಿಳೆಯರು ಸಮಾಜಕ್ಕೆ ಮುಖ ತೋರಿಸದಂತಹ ಯಾತನೆ ಅನುಭವಿಸುತ್ತಿದ್ದಾರೆ. ಈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ರಾಜಕೀಯ ಪ್ರಭಾವ ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದು, ಕೂಡಲೇ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.
ಹಕ್ಕೊತ್ತಾಯಗಳು
ಹುಬ್ಬಳ್ಳಿಯ ಅಂಜಲಿ ಅಂಬಿಗೇರ್ ಹತ್ಯೆ ಮಾಡಿದ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು, ನೇಹಾ ಹಿರೇಮಠ, ಮೀನಾ, ರುಕ್ಸಾನ, ಪ್ರಬುಧ್ಯಾ ಸೇರಿದಂತೆ ಇನ್ನಿತರೆ ಕೊಲೆ ಪ್ರಕರಣಗಳನ್ನು ವಿಶೇಷ ತನಿಖಾ ತಂಡ ರಚಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣನನ್ನು ಶೀಘ್ರ ಬಂಧಿಸಿ, ವಿಚಾರಣೆಗೊಳಪಡಿಸಿ ಶಿಕ್ಷೆ ವಿಧಿಸಬೇಕು, ಮಹಿಳೆಯರು, ಯುವತಿಯರು ಹಾಗೂ ವಿದ್ಯಾರ್ಥಿನಿಯರ ಮೇಲೆ ನಡೆದ ಕೊಲೆ, ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಬೇಗ ಇತ್ಯರ್ಥಪಡಿಸಲು ಪಾಸ್ಟ್ಟ್ರಾö್ಯಕ್ ಕೋರ್ಟ್ಗಳನ್ನು ವ್ಯವಸ್ಥೆಗೊಳಿಸಬೇಕು, ‘ನಿರ್ಭಯಾ ಕಾಯ್ದೆ’ ಸಮರ್ಪಕವಾಗಿ ಜಾರಿಗೊಳಿಸಬೇಕು, ಯೂಟೂಬ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಇತರೆ ಮಾಧ್ಯಮಗಳಲ್ಲಿ ಅಶ್ಲೀಲತೆಯನ್ನು ಬಿಂಬಿಸುವ ಚಿತ್ರ ಹಾಗೂ ವಿಡಿಯೋಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂಬ ಬೇಡಿಕೆಯುಳ್ಳ ಮನವಿಪತ್ರ ರವಾನಿಸಲಾಯಿತು.
ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಹೋರಾಟಗಾರರ ಆಕ್ರೋಶ
ಪ್ರತಿಭಟನೆಯಲ್ಲಿ ಮಹಿಳಾ ಮುಖಂಡರಾದ ಸರಸ್ವತಿ ಪಾಟೀಲ್, ವಿರುಪಮ್ಮ ಹಾಗೂ ಡಿ.ಎಚ್.ಪೂಜಾರ್, ಜಮಾಅತೆ ಇಸ್ಲಾಂ ಹಿಂದ್‌ನ ಹುಸೇನ್‌ಸಾಬ್, ಗಂಗಾಮತ ಸಮಾಜದ ಮಂಜುನಾಥ, ಬಸವರಾಜ ಬಾದರ್ಲಿ ಮಾತನಾಡಿದರು. ಚಂದ್ರಶೇಖರ ಗೊರಬಾಳ, ಡಿ.ಎಚ್.ಕಂಬಳಿ, ಬಸವಂತರಾಯಗೌಡ, ಎಸ್.ದೇವೇಂದ್ರಗೌಡ, ಶಂಕುಂತಲಾ ಪಾಟೀಲ್, ನಾಗರಾಜ್ ಪೂಜಾರ್, ಬಿ.ಎನ್.ಯರದಿಹಾಳ, ಚಿಟ್ಟಿಬಾಬು ಬೂದಿವಾಳಕ್ಯಾಂಪ್, ರಮೇಶ ಪಾಟೀಲ್ ಬೇರಿಗಿ, ಭಗತ್‌ಸಿಂಗ್ ಆಟೋ ಚಾಲಕರ ಸಂಘದ ಬಸವರಾಜ ಕೊಂಡೆ, ಮಂಜುನಾಥ ಗಾಂಧಿನಗರ, ಶಿವಪುತ್ರಪ್ಪ ತುರ್ವಿಹಾಳ, ಆರ್.ಎಚ್.ಕಲಮಂಗಿ, ಆಲಂಬಾಷಾ ಬೂದಿವಾಳ, ಮೇಘರಾಜ, ಬಸವರಾಜ ಹಸಮಕಲ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *