ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಡಿಸೆಂಬರ್ 15
ನಗರದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಕಳೆದ ಹಲವು ದಿನಗಳ ಹಿಂದೆ ಆರಂಭವಾಗಿದ್ದರೂ ಆಮೆಗತಿಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರ ಸಂಚಾರಕ್ಕೆ ಸಮಸ್ಯೆಯಾಗಿದೆ. ರೈಲ್ವೆ ಸಂಚಾರ ಆರಂಭವಾದಾಗಿನಿಂದಲೂ ಕಚ್ಚಾ ರಸ್ತೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ರಸ್ತೆ ನಿರ್ಮಾಣ ಕಾಮಗಾರಿ ವರ್ಷದ ಹಿಂದೆಯೇ ಆರಂಭವಾಗಿದ್ದರೂ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ ಎಂದು ಸಾರ್ವಜನಿಕರೊಬ್ಬರು ಹೇಳುತ್ತಾರೆ.
ಕಾಮಗಾರಿ ನಿಧಾನ
ಕೆಲವು ದಿನ ಮರಂ ಹಾಕಿ ಕೈಬಿಡಲಾಗಿತ್ತು. ತದನಂತರ ಕಂಕರ್ ಹಾಕಲಾಯಿತು. ಹೀಗೆ ಅತ್ಯಂತ ನಿಧಾನವಾಗಿ ಕಾಮಗಾರಿ ನಿರ್ವಹಿಸಲಾಗುತ್ತಿದ್ದು, ಇದರಿಂದಾಗಿ ಈ ಮಾರ್ಗದಲ್ಲಿ ಆಟೋ ಸೇರಿದಂತೆ ಇನ್ನಿತರೆ ವಾಹನ ಸುಗಮ ಸಂಚಾರಕ್ಕೆ ಸಮಸ್ಯೆಯಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿದರೆ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.
