ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಮಾರ್ಚ್ 26
ರಾಯಚೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯದಲ್ಲಿ ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ನಗರದ ಪಾಟೀಲ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ರಾಜ್ಯಮಟ್ಟದ ಯುವ ಸಂಸತ್ತು ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾಳೆ ಎಂದು ಸಂಸ್ಥೆಯ ಕಾರ್ಯದರ್ಶಿ ಆರ್.ಸಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಕಾರ್ಯಕ್ರಮದಲ್ಲಿ 628 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಮ್ಮ ಮಹಾ ವಿದ್ಯಾಲಯದ ಬಿಎಸ್ಸಿ ವಿದ್ಯಾರ್ಥಿನಿ ಸನಾ ಅಮ್ಮಿಹಾಳ್ ಕೂಡಾ ಆಯ್ಕೆಯಾಗಿದ್ದಾರೆ. ಇದೇ ಮಾರ್ಚ್ 27, 28ರಂದು ಬೆಂಗಳೂರಿನ ವಿಕಾಸಸೌಧÀದಲ್ಲಿ ನಡೆಯುವ ರಾಜ್ಯಮಟ್ಟದ ವಿಕಸಿತ ಭಾರತ್ ಯುವ ಸಂಸತ್ತು ಕಾರ್ಯಕ್ರಮದದಲ್ಲಿ ವಿದ್ಯಾರ್ಥಿನಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.