ನಮ್ಮ ಸಿಂಧನೂರು, ಡಿಸೆಂಬರ್ 12
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರ (ದೇಸಾಯಿ ಕ್ಯಾಂಪ್)ದ ಶ್ರೀಮತಿ ಎ.ಕೆ.ಆರ್.ದೇವಿ ಸ್ಮಾರಕ ಪಿಯು ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ 04-01-2026 ಭಾನುವಾರ ಬೆಳಿಗ್ಗೆ 11 ಗಂಟೆಗೆ ಟ್ಯಾಲೆಂಟ್ ಸರ್ಚ್ ಸ್ಕಾಲರ್‌ಶಿಪ್ ಪರೀಕ್ಷೆ 2026-27 ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಬಸವರಾಜ ಬಿ.ಅವರು ತಿಳಿಸಿದ್ದಾರೆ.
ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಶ್ರೀಮತಿ ಎ.ಕೆ.ಆರ್.ದೇವಿ ಸ್ಮಾರಕ ಪದವಿ ಪೂರ್ವ ಕಾಲೇಜು ಪ್ರಾರಂಭವಾಗಿ 22 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನೆನಪಿಗಾಗಿ 22ರ ಸಂಭ್ರಮ ಆಚರಣೆಯ ನಿಮಿತ್ತ ಪ್ರತಿಭಾವಂತ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.100ರಷ್ಟು ವಿದ್ಯಾರ್ಥಿ ವೇತನ ನೀಡಲಾಗುವುದು. ಜೊತೆಗೆ ಎ.ಕೆ.ಆರ್.ಡಿ. ಟ್ಯಾಲೆಂಟ್ ಸರ್ಚ್ 2026-27ರ ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಗೆ ದಾಖಲಾತಿ ಪಡೆಯುವಾಗ ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮನ್ನಣೆ
2025ನೇ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.95% ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಮತ್ತು ವಸತಿ ಸೌಲಭ್ಯ ಮತ್ತು ಶೇ.90%ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಉಚಿತ ಪ್ರವೇಶ ಮತ್ತು ವಸತಿಯಲ್ಲಿ ಶೇ.50% ರಿಯಾಯಿತಿ, ಶೇ.85%ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು.
ಜ.4ರಂದು ಸ್ಕಾಲರ್‌ಶಿಪ್ ಪರೀಕ್ಷೆ
ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿದ್ದು, ನೋಂದಣಿ ದಿನಾಂಕ : 22-12-2025 ರಿಂದ 04-01-2026 ರವರೆಗೆ ಇರುತ್ತದೆ. ಪರೀಕ್ಷೆಯು ದಿನಾಂಕ: 04-01-2026 ಭಾನುವಾರ ಬೆಳಿಗ್ಗೆ 11 ಗಂಟೆಗೆ ಶ್ರೀಮತಿ ಎ.ಕೆ.ಆರ್.ದೇವಿ ಪ.ಪೂ.ಕಾಲೇಜು, ಶ್ರೀರಾಮನಗರದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ: 9448093107, 7259995097, 9448481767 ಸಂಪರ್ಕಿಸಬಹುದಾಗಿದೆ.
