ಸಿಂಧನೂರು: ಇಂದು ಸಿಎಂ ಸಿದ್ದರಾಮಯ್ಯ ಅಂಬಾಮಠ ಜಾತ್ರೆಗೆ ಆಗಮನ ಹಿನ್ನೆಲೆ, ಸೆಕ್ಯೂರಿಟಿ ಫುಲ್ ಟೈಟ್

Spread the love

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 3

ಸಿಎಂ ಸಿದ್ದರಾಮಯ್ಯ ಅವರು ದಿನಾಂಕ: 03-01-2026ರಂದು 1.30 ಗಂಟೆಗೆ ಬಳ್ಳಾರಿ ಜಿಲ್ಲೆಯ ಜಿಂದಾಲ್ ಏರ್‌ಸ್ಟ್ರಿಪ್‌ ತೋರಣಗಲ್ಲುವಿನಿಂದ ಹೆಲಿಕಾಫ್ಟರ್ ಮೂಲಕ ಮಧ್ಯಾಹ್ನ 2 ಗಂಟೆಗೆ ಸಿಂಧನೂರು ನಗರದ ಸರ್ಕ್ಯೂಟ್ ಹೌಸ್ ಹತ್ತಿರದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ತದನಂತರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.
ಅಂಬಾಮಠದಲ್ಲಿ ಮಹಾರಥೋತ್ಸವ, ಜಂಬೂ ಸವಾರಿಗೆ ಸಿಎಂ ಚಾಲನೆ
ಮಧ್ಯಾಹ್ನ 3 ಗಂಟೆಗೆ ಸಿಎಂ ಅವರು ಸರ್ಕ್ಯೂಟ್ ಹೌಸ್ ಬಳಿಯಿರುವ ಹೆಲಿಪ್ಯಾಡ್‌ನಿಂದ ಹೆಲಿಕಾಫ್ಟರ್ ಮೂಲಕ ಶ್ರೀ ಅಂಬಾಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಮಧ್ಯಾಹ್ನ 3.30 ಗಂಟೆಗೆ ಆಗಮಿಸುವರು. ತದನಂತರ ಶ್ರೀ ಅಂಬಾದೇವಿ ಮಹಾರಥೋತ್ಸವ ಮತ್ತು ಜಂಬೂ ಸವಾರಿಗೆ ಚಾಲನೆ, ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಉದ್ಘಾಟನೆ ನೆರವೇರಿಸಲಿದ್ದಾರೆ. ತದನಂತರ 5 ಗಂಟೆಗೆ ಅಲ್ಲಿಂದ ಸಿಎಂ ಅವರು ಹೆಲಿಕಾಫ್ಟರ್ ಮೂಲಕ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Namma Sindhanuru Click For Breaking & Local News

ಸೆಕ್ಯೂರಿಟಿ ಫುಲ್ ಟೈಟ್
ಸಿಎಂ ಸಿದ್ದರಾಮಯ್ಯ ಅವರು ಅಂಬಾಮಠಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ದೇವಸ್ಥಾನ ಆವರಣ ಸೇರಿದಂತೆ ಸುತ್ತಮುತ್ತಲು ಜನದಟ್ಟಣೆಯನ್ನು ನಿಯಂತ್ರಿಸಲು ಸೆಕ್ಯೂರಿಟಿ ಫುಲ್ ಟೈಟ್ ಮಾಡಲಾಗಿದೆ. ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾವಿರಾರು ಪೊಲೀಸರನ್ನು ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಿದೆ.
2 ಕಿ.ಮೀ ದೂರದಲ್ಲಿ ವಾಹನ ದಟ್ಟಣೆ ನಿಯಂತ್ರಣ
ಅಂಬಾಮಠದಿಂದ 2 ಕಿ.ಮೀ ಅಂತರದಲ್ಲೇ ವಾಹನ ದಟ್ಟಣೆಗೆ ವಿಶೇಷ ಕ್ರಮವಹಿಸಲಾಗಿದೆ. ಅಲ್ಲಲ್ಲಿ ವಾಹನಗಳ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಟ್ರಾಫಿಕ್ ಮತ್ತು ಪೊಲೀಸ್ ಇಲಾಖೆಯವರು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಸೂಚನೆಗಳನ್ನು ನೀಡುವ ಜೊತೆಗೆ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾಗಿದ್ದು, ಶನಿವಾರ ಕಂಡುಬಂತು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *