ನಮ್ಮ ಸಿಂಧನೂರು, ಆಗಸ್ಟ್ 25
ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಎಪಿಎಂಸಿಯ ರೈತಭವನದಲ್ಲಿ ಆಗಸ್ಟ್ 27 ಮಂಗಳವಾರದಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರೈತ ಸಂಘ ರಾಯಚೂರು ಜಿಲ್ಲಾ ಘಟಕ ಹಾಗೂ ಸಿಪಿಐ(ಎಂಎಲ್) ಮಾಸ್‌ಲೈನ್‌ನಿಂದ ‘ದ್ವೇಷ ರಾಜಕಾರಣದ ಹಿನ್ನೆಲೆ ಮತ್ತು ಜನತೆಯ ಮುಂದಿರುವ ಸವಾಲುಗಳು’ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಕೆಆರ್‌ಎಸ್ ತಾಲೂಕು ಅಧ್ಯಕ್ಷ ರಮೇಶ್ ಪಾಟೀಲ್ ಭೇರಿಗಿ ಹಾಗೂ ಟಿಯುಸಿಐ ಜಿಲ್ಲಾಧ್ಯಕ್ಷ ಬಿ.ಎನ್.ಯರದಿಹಾಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಿಪಿಐ(ಎಂಎಲ್) ಮಾಸ್‌ಲೈನ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಂ.ಪ್ರದೀಪ್‌ಸಿಂಗ್ ಠಾಕೂರ್ ಅವರು ವಿಷಯ ಮಂಡನೆ ಮಾಡಲಿದ್ದಾರೆ. ಮಾಸ್‌ಲೈನ್ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ್, ರಾಜ್ಯ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ, ಕೆಆರ್‌ಎಸ್ ಜಿಲ್ಲಾಧ್ಯಕ್ಷ ಅಶೋಕ ನಿಲೋಗಲ್, ಜಿಲ್ಲಾ ಕಾರ್ಯದರ್ಶಿ ಚಿಟ್ಟಿಬಾಬು ಬೂದಿವಾಳಕ್ಯಾಂಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ತಾಲೂಕಿನ ರೈತ, ದಲಿತ, ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ವಿಚಾರ ಸಂಕಿರಣದಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.