ಸಿಂಧನೂರು: ಎಸ್ಪಿ ಅರುಣಾಂಶು ಗಿರಿ ಅಂಭಾಮಠಕ್ಕೆ ಭೇಟಿ, ಪರಿಶೀಲನೆ

Spread the love

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 02

ತಾಲೂಕಿನ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವ ಹಾಗೂ ಜ.3ರಂದು ಅಂಬಾಮಠದ ರಥೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಅವರು ಶುಕ್ರವಾರ ಸಂಜೆ ಅಂಬಾಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಹಂಪನಗೌಡ ಬಾದರ್ಲಿ ಅವರೊಂದಿಗೆ ಎಸ್ಪಿ ಅವರು ಕೆಲಕಾಲ ಚರ್ಚಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್‌, ತಹಸೀಲ್ದಾರ್‌ ಅರುಣ ದೇಸಾಯಿ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ ಸೇರಿದಂತೆ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರೆ ಇಲಾಖೆಯ ಅಧಿಕಾರಿಗಳು ಇದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *