ಸಿಂಧನೂರು: ಜೂನ್ 25ಕ್ಕೆ ತುಂಗಭದ್ರಾ ಡ್ಯಾಂ ಹೊಸ ಗೇಟ್ ಉದ್ಘಾಟನಾ ಕಾರ್ಯಕ್ರಮ, ಕರ್ನಾಟಕ ನಿಯೋಗದಿಂದ ಆಂಧ್ರಪ್ರದೇಶದ ನೀರಾವರಿ ಸಚಿವರಿಗೆ ಆಮಂತ್ರಣ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜೂನ್ 22, 2026

ಜೂನ್ 25, 2026ರಂದು ತುಂಗಭದ್ರಾ ಡ್ಯಾಂನ 33 ಹೊಸಗೇಟ್‌ಗಳ ಉದ್ಘಾಟನಾ ಕಾರ್ಯಕ್ರಮ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಆಯೋಜಿಸಲಾಗಿದ್ದು, ಕರ್ನಾಟಕದ ನಿಯೋಗ ಆಂಧ್ರಪ್ರದೇಶಕ್ಕೆ ತೆರಳಿ, ಅಲ್ಲಿನ ಸರ್ಕಾರದ ನೀರಾವರಿ ಸಚಿವ ನಿಮ್ಮಲ ರಾಮನಾಯ್ಡು ಅವರನ್ನು ಸೋಮವಾರ ಭೇಟಿಯಾಗಿ ಆಮಂತ್ರಿಸಿತು.
ಯಲಬುರ್ಗಾ ಶಾಸಕ ಹಾಗೂ ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎನ್.ಎಸ್.ಭೋಸರಾಜು ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನಿಯೋಗವು ಸಿಎಂ ಡಿ.ಕೆ.ಶಿವಕುಮಾರ ಅವರ ಸೂಚನೆಯ ಹಿನ್ನೆಲೆಯಲ್ಲಿ ಅಲ್ಲಿನ ಸಚಿವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಸ್ವಾಗತಿಸುವ ಜೊತೆಗೆ ಕೆಲ ಕಾಲಕಾಲ ಚರ್ಚಿಸಿತು. ಈ ಸಂದರ್ಭದಲ್ಲಿ ರಾಜ್ಯ ನೀರಾವರಿ ಇಲಾಖೆಯ ಅಧಿಕಾರಿಗಳು ಇನ್ನಿತರರು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *