ಸಿಂಧನೂರು: ಮರಕ್ಕೆ ಸೈಕಲ್‌ ಮೋಟರ್‌ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು

Spread the love

ನಮ್ಮ ಸಿಂಧನೂರು, ಡಿಸೆಂಬರ್ 27
ತಾಲೂಕಿನ ಮೂಡಲಗಿರಿಕ್ಯಾಂಪ್ ಹತ್ತಿರ ಸೈಕ್‌ಲ್‌ ಮೋಟರ್‌ವೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಶುಕ್ರವಾರ ತಡರಾತ್ರಿ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ಗಾಂಧಿನಗರದ ಸಂತೋಷ (22), ಹನುಮಂತರಾಯ (22) ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ. ಈ ಇಬ್ಬರು ಯುವಕರು ಬೈಕ್‌ನಲ್ಲಿ ಗಾಂಧಿನಗರದಿಂದ ಸಿಂಧನೂರಿಗೆ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯ ಬಳಿ ಮೃತ ಕುಟುಂಬದವರ ಆಕ್ರಮಧ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ಪಿಐ ವಿನಾಯಕ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *