ಸಿಂಧನೂರು: ಎಡದಂಡೆ ನಾಲೆ ನೀರಿನ ಹರಿವು ಸ್ಥಗಿತ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 12

ಎಡದಂಡೆ ಮುಖ್ಯ ನಾಲೆ ನೀರಿನ ಹರಿವು ಸ್ಥಗಿತಗೊಂಡಿದ್ದು, ಮಸ್ಕಿ ತಾಲೂಕಿನ ರಂಗಾಪುರ ಸಮೀಪದ ನಂ.54ನೇ ಉಪ ಕಾಲುವೆ ತಳ ಕಂಡಿದೆ. ಡ್ಯಾಂಗೆ ಹೊಸ ಕ್ರಸ್ಟ್ಗೇಟ್ ಅಳವಡಿಸುವ ಹಿನ್ನೆಲೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜ.10ರವರೆಗೆ ಮಾತ್ರ ನೀರು ಹರಿಸಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿದೆ. ಈ ಬಾರಿ ಒಂದೇ ಬೆಳೆಯಾಗಿದ್ದರಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಕೃಷಿ ಕೂಲಿಕಾರರು ಕೆಲಸ ಅರಸಿ ಮಹಾನಗರಗಳಿಗೆ ಗುಳೆ ಹೋಗುತ್ತಿದ್ದಾರೆ. ಇನ್ನು ಕೆಲವರು ಉದ್ಯೋಗ ಖಾತ್ರಿ ಕೆಲಸ ನೆಚ್ಚಿಕೊಂಡಿದ್ದಾರೆ.


Spread the love