ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜೂನ್ 26
ಸಿಂಧನೂರು-ಮಸ್ಕಿ 150ಎ ಹೆದ್ದಾರಿ ಮಾರ್ಗದಲ್ಲಿ ಬರುವ 7 ಕಿರು ಸೇತುವೆಗಳ ಮರು ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಈ ಮಾರ್ಗದಲ್ಲಿನ ಸೇತುವೆಗಳು ಶಿಥಿಲಗೊಂಡಿದ್ದರಿAದ ವಾಹನ ಚಾಲಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅಂದಾಜು 28 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಕೊಪ್ಪಳ ಕ್ಷೇತ್ರದ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಹಂಪನಗೌಡ ಬಾದರ್ಲಿ ಅವರು ಕೆಲ ದಿನಗಳ ಹಿಂದೆ ಚಾಲನೆೆ ನೀಡಿದ್ದರು. ವಾಹನ ಸಂಚಾರಕ್ಕೆ ತಾತ್ಕಾಲಿಕ ಸೇತುವೆ ನಿರ್ಮಿಸಿ, ಸೇತುವೆಗಳನ್ನು ನಿರ್ಮಿಸುವ ಕೆಲಸ ಚುರುಕಿನಿಂದ ನಡೆದಿದೆ.